Kannadavahini

ಬಾರಿಸು ಕನ್ನಡ ಡಿಂಡಿಮವ

champions trophy cricket

ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಫೈನಲ್ ಇಂದು: ಅಜೇಯ ಭಾರತಕ್ಕೆ ವಿಜಯ?

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿವೆ. ಲೀಗ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಆತ್ಮವಿಶ್ವಾಸದಲ್ಲಿ ಭಾರತ ತಂಡ ಇದ್ದರೆ, ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕಿವೀಸ್ ಪಡೆ…

ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾ ನಾಯಕ ಸ್ಟೀವನ್ ಸ್ಮಿತ್

ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಭಾರತ ವಿರುದ್ಧ…

ಚಾಂಪಿಯನ್ಸ್ ಟ್ರೋಫಿ: ಆಸ್ಟ್ರೇಲಿಯಾ ಬಗ್ಗುಬಡಿದು ಫೈನಲ್ ಪ್ರವೇಶಿಸಿದ ಭಾರತ

ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ 4 ವಿಕೆಟ್ ಗಳಿಂದ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಹಾಕಿದೆ. ದುಬೈನಲ್ಲಿ ಮಂಗಳವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್ ಗಳಲ್ಲಿ 264 ರನ್ ಆಲೌಟಾಯಿತು….

ಚಾಂಪಿಯನ್ಸ್ ಟ್ರೋಫಿ: ಕಿವೀಸ್ ಕಿವಿ ಹಿಂಡಿದ `ಚಕ್ರವರ್ತಿ’: ಭಾರತಕ್ಕೆ 44 ರನ್ ಗೆಲುವಿನ `ಶ್ರೇಯಸ್’

ಸ್ಪಿನ್ ಮಾಂತ್ರಿಕ ವರುಣ್ ಚಕ್ರವರ್ತಿ ನೇತೃತ್ವದ ಭಾರತದ ಸ್ಪಿನ್ ದಾಳಿ ನೆರವಿನಿಂದ ಭಾರತ ತಂಡ 44 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ `ಎ’ ಗುಂಪಿನಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿದೆ. ದುಬೈನಲ್ಲಿ ಭಾನುವಾರ ನಡೆದ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು…

ಕಿವೀಸ್ ವಿರುದ್ಧ `ತ್ರಿಶತಕ’ ಬಾರಿಸಲಿರುವ ವಿರಾಟ್ ಕೊಹ್ಲಿ: ಈ ಸಾಧನೆ ಮಾಡಿದ ವಿಶ್ವದ ಮೊದಲಿಗ!

ಶತಕ ಸಿಡಿಸಿ ಭರ್ಜರಿ ಫಾರ್ಮ್ ಗೆ ಮರಳಿರು ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಭಾನುವಾರ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಆಡುವ ಮೂಲಕ ತ್ರಿಶತಕ ಬಾರಿಸಲಿದ್ದಾರೆ. ಹೌದು, ಬಿಳಿ ಚೆಂಡಿನ ಕ್ರಿಕೆಟ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ವಿರಾಟ್ ಕೊಹ್ಲಿ ದುಬೈನಲ್ಲಿ ಭಾನುವಾರ ನಡೆಯಲಿರುವ ಪಂದ್ಯದಲ್ಲಿ 300ನೇ ಏಕದಿನ ಪಂದ್ಯ ಆಡಲಿದ್ದಾರೆ. ಈ ಮೂಲಕ ಏಕದಿನದಲ್ಲಿ…

ಭಾರತ-ಕಿವೀಸ್ ಇಂದು ಫೈಟ್: ಸೆಮೀಸ್ ಗೆ ಮುನ್ನ ಮಿನಿ ಸಮರ!

ದುಬೈ: ಈಗಾಗಲೇ ಸೆಮಿಫೈನಲ್ ನಲ್ಲಿ ತನ್ನ ಸ್ಥಾನ ಭದ್ರತಪಡಿಸಿಕೊಂಡಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ಚಾಂಪಿಯನ್ಸ್ ಟ್ರೋಫಿಯ ಗ್ರೂಪ್ ಎ ವಿಭಾಗದ ಕಡೆಯ ಪಂದ್ಯದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳಿಗೆ ಸೆಮಿಫೈನಲ್ ಗೂ ಮುನ್ನ ಮಿನಿ ಸಮರವಾಗಿದೆ.ಒಂದು ರೀತಿಯಲ್ಲಿ…

16 ವರ್ಷ ನಂತರ ಚಾಂಪಿಯನ್ಸ್ ಟ್ರೋಫಿ ಸೆಮೀಸ್ ಗೆ ಆಸ್ಟ್ರೇಲಿಯಾ: ಆಫ್ಘಾನ್ ಅತಂತ್ರ

ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ 16 ವರ್ಷಗಳ ನಂತರ ಸೆಮಿಫೈನಲ್ ಪ್ರವೇಶಿಸಿದರೆ, ಆಫ್ಘಾನಿಸ್ತಾನದ ಸ್ಥಿತಿ ಅತಂತ್ರವಾಗಿದೆ. ಪಾಕಿಸ್ತಾನದ ಲಾಹೋರ್ ನಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಆಫ್ಘಾನಿಸ್ತಾನ ನಡುವಣ ಬಿ ಗುಂಪಿನ ಪಂದ್ಯ ಮಳೆಯಿಂದ ರದ್ದುಗೊಂಡಿತು. ಇದರಿಂದ ಉಭಯ ತಂಡಗಳು ಅಂಕಗಳನ್ನು ಹಂಚಿಕೊಳ್ಳಬೇಕಾಯಿತು. ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 50 ಓವರ್…

ಇಂಗ್ಲೆಂಡ್ ತಂಡದ ನಾಯಕತ್ವ ತ್ಯಜಿಸಿದ ಜೋ ಬಟ್ಲರ್: ದ.ಆಫ್ರಿಕಾ ವಿರುದ್ಧ ನಾಳೆ ಕೊನೆ ಪಂದ್ಯ!

ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಸ್ಥಾನವನ್ನು ಜೋ ಬಟ್ಲರ್ ತ್ಯಜಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಶನಿವಾರ ಎದುರಿಸಲಿದೆ. ಈ ಪಂದ್ಯ ಇಂಗ್ಲೆಂಡ್ ತಂಡವನ್ನು ಕೊನೆಯ ಬಾರಿಗೆ ಮುನ್ನಡೆಸಲಿದ್ದೇನೆ ಎಂದು ಜೋ ಬಟ್ಲರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಫ್ಘಾನಿಸ್ತಾನ ವಿರುದ್ಧ ಸೋಲುಂಡ…

ಚಾಂಪಿಯನ್ಸ್ ಟ್ರೋಫಿ: ಸೆಮೀಸ್ ಗೆ ಭಾರತ, ಕಿವೀಸ್, ಹೊರಬಿದ್ದ ಪಾಕ್, ಬಾಂಗ್ಲಾ!

ಬೆಂಗಳೂರಿನ ರಚಿನ್ ರವೀಂದ್ರ ಸಿಡಿಸಿದ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡ 5 ವಿಕೆಟ್ ಗಳಿಂದ ಜಯ ಸಾಧಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಜೊತೆ ಸೆಮಿಫೈನಲ್ ಗೆ ಲಗ್ಗೆ ಹಾಕಿದರೆ, ಹಾಲಿ ಚಾಂಪಿಯನ್ ಹಾಗೂ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಹೊರಬಿದ್ದವು. ರಾವಲ್ಪಿಂಡಿಯಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವನ್ನು 9…

ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ ಕಟ್ಟಿದ್ದು 7 ಕೋಟಿ ರೂ.ಮೌಲ್ಯದ ವಾಚ್?

ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪಾಕಿಸ್ತಾನ ವಿರುದ್ಧ ಭಾನುವಾರ ನಡೆದ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕಟ್ಟಿದ ವಾಚ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಬೆಲೆ ಕುರಿತು ಚರ್ಚೆಗಳು ನಡೆದಿವೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಪ್ರಮುಖ ಆಕರ್ಷಣೆ ಆಗಿದ್ದೂ ಅಲ್ಲದೇ ಭಾರೀ ಚರ್ಚೆಗೆ ಕಾರಣವಾಗಿದ್ದರೆ,…