ನಟ ದರ್ಶನ್ ಬಿಗ್ ರಿಲೀಫ್: ಜಾಮೀನು ಷರತ್ತು ಸಡಿಲ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರು ಬಿಟ್ಟು ಹೊರಗೆ ಎಲ್ಲೂ ಹೋಗದಂತೆ ಕಟ್ಟಿ ಹಾಕಿದ್ದ ಹೈಕೋರ್ಟ್ ಇದೀಗ ಷರತ್ತು ಸಡಿಲಗೊಳಿಸಿದೆ. ಇದರೊಂದಿಗೆ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಸಿನಿಮಾ ಚಿತ್ರೀಕರಣ ಬಾಕಿ ಸೇರಿದಂತೆ ಹಲವು ಕಾರಣ ನೀಡಿ ದರ್ಶನ್ ದೇಶಾದ್ಯಂತ ಸಂಚರಿಸಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಅವರ ಮನವಿಯನ್ನು ಪುರಸ್ಕರಿಸಿ ದೇಶದ…
ಅಪ್ರೂವರ್ ಆಗಲು ಪೊಲೀಸರಿಂದ ಒತ್ತಡ: ವಿಚಾರಣೆ ವೇಳೆ ದರ್ಶನ್ ಪರ ವಕೀಲರಿಂದ ಆರೋಪ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ಏಪ್ರಿಲ್ 8ಕ್ಕೆ ಮುಂದೂಡಿದೆ. ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಕೊಲೆ ಮಾಡಿದ್ದಾರೆ ಎಂಬ ಪೊಲೀಸರ ಆರೋಪದ ಕುರಿತು ವಿಚಾರಣೆ ಮಂಗಳವಾರ ನಡೆದಿದ್ದು, ದರ್ಶನ್ ಮತ್ತು ಪವಿತ್ರಾ ಗೌಡ ವಿಚಾರಣೆಗೆ ಖುದ್ದು ಹಾಜರಾಗಿದ್ದರೆ, ನಿಖಿಲ್ ಮತ್ತು ಕೇಶವಮೂರ್ತಿ ಗೈರು ಹಾಜರಾಗಿದ್ದರು. ಇತರೆ…
ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಅರ್ಜಿ: ಮುಂದಿನ ವಾರದಿಂದ ಸುಪ್ರೀಂಕೋರ್ಟ್ ವಿಚಾರಣೆ!
ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಮುಂದಿನ ವಾರದಿಂದ ವಿಚಾರಣೆ ಆರಂಭವಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ…
ನಟ ದರ್ಶನ್ ಬೆನ್ನುನೋವಿನ ಶಸ್ತ್ರಚಿಕಿತ್ಸೆಗೆ ಮುಹೂರ್ತ ಫಿಕ್ಸ್: ವೈದ್ಯ ಅಜಯ್ ಹೆಗ್ಡೆ ಮಾಹಿತಿ
ಬೆನ್ನು ನೋವಿನಿಂದ ಸರಿಯಾಗಿ ನಡೆಸಲು ಆಗದ ಸ್ಥಿತಿಯಲ್ಲಿರುವ ನಟ ದರ್ಶನ್ ಗೆ ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೆ ಸಮಯ ನಿಗದಿಪಡಿಸಲಾಗಿದೆ ಎಂದು ವೈದ್ಯ ಡಾ.ಅಜಯ್ ಹೆಗ್ಡೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಅವರಿಗೆ ಮೈಸೂರಿನ ಆಸ್ಪತ್ರೆಯೊಂದರಲ್ಲಿ ಬೆನ್ನಿನ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಲಾಗಿದೆ. ಆದರೆ ದಿನಾಂಕ ನಿಗದಿಪಡಿಸಿಲ್ಲ ಎಂದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ…
48 ದಿನದ ನಂತರ ಶಸ್ತ್ರಚಿಕಿತ್ಸೆ ಇಲ್ಲದೇ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಟ ದರ್ಶನ್ 48 ದಿನ ಆಸ್ಪತ್ರೆಯಲ್ಲಿದ್ದರೂ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಯಿಂದ ಬುಧವಾರ ಬೆಳಿಗ್ಗೆ ಬಿಡುಗಡೆ ಆದ ದರ್ಶನ್, ತಮ್ಮ ರಾಜರಾಜೇಶ್ವರಿ ನಿವಾಸಕ್ಕೆ ತೆರಳದೇ ಪತ್ನಿ ವಿಜಯಲಕ್ಷ್ಮೀ ಅವರ ಹೊಸಕೆರೆಹಳ್ಳಿ ಮನೆಗೆ ತೆರಳಿದ್ದಾರೆ. 48 ದಿನಗಳ…
Darshan Discharge ಸೆಷನ್ಸ್ ಕೋರ್ಟ್ ಗೆ ಹಾಜರಾದ ನಟ ದರ್ಶನ್
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಸೋಮವಾರ ಮಧ್ಯಾಹ್ನ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ಒಂದೂವರೆ ತಿಂಗಳ ನಂತರ ಹೊರಗೆ ಬಂದಿದ್ದು, ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದಾರೆ. ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಶ್ಯೂರಿಟಿ ಬಾಂಡ್ ಗೆ ಸಹಿ ಹಾಕಲು ಪತ್ನಿ ವಿಜಯಲಕ್ದ್ಮೀ ಹಾಗೂ ನಟ ಧನ್ವೀರ್ ಜೊತೆ ಹೊರಗೆ ಬಂದಿರುವ ನಟ ದರ್ಶನ್ ಸೆಷನ್ಸ್ ಕೋರ್ಟ್ ಗೆ…
BIG BREAKING ನಟ ದರ್ಶನ್ ಪವಿತ್ರಾ ಗೌಡಗೆ ಬಿಗ್ ರಿಲೀಫ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಮಂಜೂರು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಕಾರಣ ಶಸ್ತ್ರಚಿಕಿತ್ಸೆ ಕಾರಣ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಪ್ರಕರಣದ 7 ಆರೋಪಿಗಳಿಗೆ ಸಕ್ರಿಯ ಜಾಮೀನು ನೀಡಿದೆ. ಪ್ರಸ್ತುತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ…
ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ಶುಕ್ರವಾರಕ್ಕೆ ಮುಂದೂಡಿಕೆ
ಅನಾರೋಗ್ಯದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಸಹಜ ಜಾಮೀನು ಹಾಗೂ ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಇನ್ನಿತರ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಹೈಕೋರ್ಟ್ ಮುಂದೂಡಿದೆ. ದರ್ಶನ್ ಪರವಾಗಿ ಹಿರಿಯ ಲಾಯರ್ ಸಿ.ವಿ. ನಾಗೇಶ್ ಇತ್ತೀಚೆಗೆ ಹೈಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರು. ಮಂಗಳವಾರ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ…
Darshan ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ
ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸೆಷನ್ಸ್ ನ್ಯಾಯಾಲಯ ನವೆಂಬರ್ 28ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ನೇತೃತ್ವದ ಪೀಠ ಮಂಗಳವಾರ ಸಾಮಾನ್ಯ ಜಾಮೀನು ಅರ್ಜಿ ಕುರಿತು ಸುದೀರ್ಘ ವಿಚಾರಣೆ ನಡೆಸಿದ ನಂತರ ವಿಚಾರಣೆಯನ್ನು ಎರಡು ದಿನಗಳಿಗೆ ಮುಂದೂಡಿದೆ. ಬೆನ್ನು ನೋವಿನ ಕಾರಣ 6 ವಾರಗಳ ಕಾಲ ಚಿಕಿತ್ಸೆಗಾಗಿ ಜಾಮೀನು ನೀಡಿದ್ದ…
ದರ್ಶನ್ ಗೆ ಸಂಕಷ್ಟ: ಜಾಮೀನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಲು ಸರ್ಕಾರ ಅನುಮತಿ!
ನಟ ದರ್ಶನ್ ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆನ್ನು ನೋವಿನಿಂದ ನರಳುತ್ತಿರುವ ದರ್ಶನ್ ಗೆ ಚಿಕಿತ್ಸೆ ನೀಡಲು ಹೈಕೋರ್ಟ್ ೬ ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದು, ಈ ಪ್ರಸ್ತಾಪಕ್ಕೆ…