23 ಕೋಟಿಯ ಕ್ಲಾಸೆನ್, 18 ಕೋಟಿಗೆ ಕಮಿನ್ಸ್ ಉಳಿಸಿಕೊಂಡ ಸನ್ ರೈಸರ್ಸ್ ಹೈದರಾಬಾದ್!
ಹೆನ್ರಿಚ್ ಕ್ಲಾಸೆನ್ ಮತ್ತು ಪ್ಯಾಟ್ ಕಮಿನ್ಸ್ ಸೇರಿದಂತೆ ಕಳೆದ ಐಪಿಎಲ್ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ. 2025ರ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಕ್ಲಾಸೆನ್ ಅವರನ್ನು 23 ಕೋಟಿ ರೂ.ಗೆ ಖರೀದಿಸಿತ್ತು. ಮೊದಲ ಪ್ರಾಶಸ್ತ್ಯ ಆಟಗಾರನಾಗಿ ಕ್ಲಾಸೆನ್ ಅವರನ್ನು ಹಾಗೂ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು…
ತಂಡದಲ್ಲೇ ಉಳಿಯುವ ಐಪಿಎಲ್ ಆಟಗಾರರ ಪಟ್ಟಿ: ಲಕ್ನೋದಲ್ಲಿ ಕೆಎಲ್ ರಾಹುಲ್, ಆರ್ ಸಿಬಿಯಲ್ಲಿ ಮ್ಯಾಕ್ಸ್ ವೆಲ್?
ಭಾರೀ ಚರ್ಚೆಗೆ ಕಾರಣವಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ಉಳಿಸಿಳ್ಳಲಿದ್ದರೆ, ಕರ್ನಾಟಕದ ಕೆಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಉಳಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಇದರಿಂದ ಆರ್ ಸಿಬಿಗೆ ರಾಹುಲ್ ಬರುವ ಅವಕಾಶ ಕೈ ತಪ್ಪುವ ಸಾಧ್ಯತೆ ಇದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಬಾರಿ ವಿಫಲರಾಗಿದ್ದ ಗ್ಲೆನ್…
ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ.: ಐಪಿಎಲ್ ಆಟಗಾರರಿಗೆ ಬಿಸಿಸಿಐನಿಂದ ಬಂಪರ್ ಘೋಷಣೆ!
ಐಪಿಎಲ್ ನಲ್ಲಿ ಆಡುವ ಪ್ರತಿ ಪಂದ್ಯಕ್ಕೆ ಆಟಗಾರರಿಗೆ 7.5 ಲಕ್ಷ ರೂ. ಶುಲ್ಕ ನೀಡುವುದಾಗಿ ಬಿಸಿಸಿಐ ಘೋಷಣೆ ಮಾಡಿದೆ. ಈ ಮೂಲಕ ಭಾರತೀಯ ಆಟಗಾರರಿಗೆ ಬಂಪರ್ ಘೋಷಣೆ ಮಾಡಿದೆ. ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಶನಿವಾರ ಎಕ್ಸ್ ನಲ್ಲಿ ಈ ವಿಷಯವನ್ನು ಪೋಸ್ಟ್ ಮಾಡಿ ಐತಿಹಾಸಿಕ ನಿರ್ಧಾರವನ್ನು ಘೋಷಿಸಿದ್ದಾರೆ. ಐಪಿಎಲ್ ನಲ್ಲಿ ಆಟಗಾರರನ್ನು ಹೆಚ್ಚು…
ಬಿಸಿಸಿಐಗೆ 5120 ಕೋಟಿ ಕೊಟ್ಟ ಐಪಿಎಲ್: ಒಟ್ಟು ಆದಾಯ ಎಷ್ಟು ಗೊತ್ತಾ?
ಐಪಿಎಲ್ ಟಿ-20 ಟೂರ್ನಿಯ ಆದಾಯದಿಂದ ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾದ ಬಿಸಿಸಿಐ ಇನ್ನಷ್ಟು ಶ್ರೀಮಂತವಾಗುತ್ತಿದೆ. 2023ನೇ ಸಾಲಿನಲ್ಲಿ ಐಪಿಎಲ್ ನಿಂದ ಬಿಸಿಸಿಐಗೆ 5120 ಕೋಟಿ ರೂ. ಆದಾಯ ಗಳಿಸಿ ಹೊಸ ದಾಖಲೆ ಬರೆದಿದೆ. 2023ನೇ ಸಾಲಿನಲ್ಲಿ ತನ್ನ ಲಾಭಂಶದಲ್ಲಿ ಬಿಸಿಸಿಐಗೆ ಐಪಿಎಲ್ 5120 ಕೋಟಿ ರೂ. ನೀಡಿದೆ. ಇದು ಕಳೆದ ಸಾಲಿಗೆ ಹೋಲಿಸಿದರೆ ಶೇ.116ರಷ್ಟು ಹೆಚ್ಚಳವಾಗಿದೆ….
IPL: ಡೆಲ್ಲಿ ಕ್ಯಾಪಿಟಲ್ ತೊರೆದು ಈ ತಂಡ ಸೇರಲಿದ್ದಾರಾ ರಿಷಭ್ ಪಂತ್?
ವಿಕೆಟ್ ಕೀಪರ್ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದು, ಅವರನ್ನು ಸೆಳೆಯಲು ಫ್ರಾಂಚೈಸಿಗಳ ನಡುವೆ ಪೈಪೋಟಿ ನಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರನ್ನು ವಜಾಗೊಳಿಸಿದ ಬೆನ್ನಲ್ಲೇ ನಾಯಕ ರಿಷಭ್ ಪಂತ್ ಸ್ಥಾನಕ್ಕೂ ಕುತ್ತು ಬಂದಿದೆ ಎಂದು ಹೇಳಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದದ ಡೈರೆಕ್ಟರ್ ಆಫ್ ಕ್ರಿಕೆಟ್ ಆಗಿರುವ ಮಾಜಿ…
ಭಾರತ ತಂಡದ ಕೋಚ್ ರೇಸ್ ನಿಂದ ಹಿಂದೆ ಸರಿದ ಗೌತಮ್ ಗಂಭೀರ್?
ರಾಹುಲ್ ದ್ರಾವಿಡ್ ನಿರ್ಗಮನದ ನಂತರ ತೆರವಾಗಲಿರುವ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದ ಸ್ಪರ್ಧೆಯಿಂದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹಿಂದೆ ಸರಿದ ಸುಳಿವು ನೀಡಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ 3ನೇ ಬಾರಿ ಪ್ರಶಸ್ತಿ ಗೆದ್ದ ನಂತರ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಕೋಚ್ ಆಗಲಿದ್ದಾರೆ ಎಂಬ ವದಂತಿ ಹರಡಿತ್ತು. ಬಿಸಿಸಿಐ ಕಾರ್ಯದರ್ಶಿ ಜೈ…
ಮಿಚೆಲ್ ಸ್ಟಾರ್ಕ್ ಗೆ 24.75 ಕೋಟಿ, ರಿಂಕುಗೆ 55 ಲಕ್ಷ! ಕೆಕೆಆರ್ ವೇತನ ತಾರತಮ್ಯ?
ಮೂರು ಬಾರಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಟಗಾರರಿಗೆ ಹಂಚಿಕೆಯಾಗುತ್ತಿರು ವೇತನ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ರಿಂಕು ಸಿಂಗ್ ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ನಲ್ಲಿ ಗೆಲ್ಲಲು ಮಹತ್ವದ ಪಾತ್ರ ವಹಿಸಿದ ಮಿಚೆಲ್ ಸ್ಟಾರ್ಕ್ ಅವರನ್ನು ಹರಾಜಿನಲ್ಲಿ 24.75 ಕೋಟಿ…
2 ಬಾರಿ ಆರೆಂಜ್ ಕ್ಯಾಪ್ ಪಡೆದ ಮೊದಲ ಭಾರತೀಯ ವಿರಾಟ್ ಕೊಹ್ಲಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 17ನೇ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪಡೆದಿದ್ದಾರೆ. ಈ ಮೂಲಕ ಎರಡು ಬಾರಿ ಆರೆಂಜ್ ಕ್ಯಾಪ್ ಪಡೆದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಆರ್ ಸಿಬಿ ತಂಡದ ಅಮೋಘ ಪ್ರದರ್ಶನದಿಂದ ಪ್ಲೇಆಫ್ ಪ್ರವೇಶಿಸಿ…
IPL 2024: 10 ವರ್ಷದ ನಂತರ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್!
ಬಾಲಿವುಡ್ ನಟ ಶಾರೂಖ್ ಖಾನ್ ಒಡೆತನದ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ 3ನೇ ಬಾರಿ ಐಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ಚೆನ್ನೈನಲ್ಲಿ ನಡೆದ ಫೈನಲ್ ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 18.3 ಓವರ್ ಗಳಲ್ಲಿ 113 ರನ್…
ಕೆಕೆಆರ್ 113ಕ್ಕೆ ಆಲೌಟ್: ಐಪಿಎಲ್ ಫೈನಲ್ ನಲ್ಲಿ 2 ಕಳಪೆ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್!
ಕೋಲ್ಕತಾ ನೈಟ್ ರೈಡರ್ಸ್ ಮಾರಕ ದಾಳಿಗೆ ತತ್ತರಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡ 113 ರನ್ ಗೆ ಆಲೌಟಾಗಿದೆ. ಈ ಮೂಲಕ ಐಪಿಎಲ್ ಫೈನಲ್ ನಲ್ಲಿ ಅತೀ ಕಳಪೆ ಮೊತ್ತಕ್ಕೆ ಆಲೌಟಾದ ದಾಖಲೆಗೆ ಪಾತ್ರವಾಗಿದೆ. ಚೆನ್ನೈ ನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವ ನಿರ್ಧರಿಸಿದ ಸನ್ ರೈಸರ್ಸ್ ಹೈದರಾಬಾದ್…