Kannadavahini

ಬಾರಿಸು ಕನ್ನಡ ಡಿಂಡಿಮವ

kannada news

ಆಮದು ಸುಂಕ ಇಳಿಸಲು ಒಪ್ಪಿಕೊಂಡಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು

ಅಮೆರಿಕದ ವಸ್ತುಗಳ ಮೇಲಿನ ಆಮದು ಸುಂಕ ಇಳಿಸುವುದಾಗಿ ಒಪ್ಪಿಕೊಂಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡುವ ಮೂಲಕ ಡೊನಾಲ್ಡ್ ಟ್ರಂಪ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದೆ. ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್ ತಮ್ಮ ದೇಶದ ವಸ್ತುಗಳ ಮೇಲೆ ಎಷ್ಟು ತೆರಿಗೆ ವಿಧಿಸಲಾಗುತ್ತದೆಯೋ ಅಷ್ಟೇ ಪ್ರಮಾಣದ…

ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಫೈನಲ್ ಇಂದು: ಅಜೇಯ ಭಾರತಕ್ಕೆ ವಿಜಯ?

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿವೆ. ಲೀಗ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಆತ್ಮವಿಶ್ವಾಸದಲ್ಲಿ ಭಾರತ ತಂಡ ಇದ್ದರೆ, ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕಿವೀಸ್ ಪಡೆ…

ರಾಜಕೀಯ

ಬಿಜೆಪಿಗೆ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು: ರಾಹುಲ್ ಗಾಂಧಿ ಅಸಮಾಧಾನ

ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಲ್ಲಿ ಕೆಲವರು ಇದ್ದಾರೆ. ಅಂತಹ 30-40…

SC/ST ಸಮುದಾಯಗಳಿಗೆ 42,018 ಕೋಟಿ ರೂ. ಅನುದಾನ

ಬೆಂಗಳೂರು:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆಯ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌‍ಸಿಪಿ/ಟಿಎಸ್‌‍ಪಿ ಅಡಿ ಒದಗಿಸಿದ್ದಾರೆ. ಪರಿಶಿಷ್ಟ ಜಾತಿಯ ಉಪಯೋಜನೆಯಡಿ 29,992 ಕೋಟಿ ರೂ., ಬುಡಕಟ್ಟು ಉಪಯೋಜನೆಯಡಿ 12,026 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ.ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಸೌಲಭ್ಯಕ್ಕೆ…

ನಕ್ಸಲ್ ಮುಕ್ತ ರಾಜ್ಯ ಘೋಷಣೆ: ನಕ್ಸಲ್ ನಿಗ್ರಹ ಪಡೆ ವಿಸರ್ಜನೆ

ಬೆಂಗಳೂರು:ಇತ್ತೀಚಿಗೆ ಆರು ಮಂದಿ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗತಿ ರಾಜ್ಯವು ನಕ್ಸಲ್ ಮುಕ್ತವಾಗಿದ್ದು, ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ಶರಣಾಗಿರುವ ನಕ್ಸಲರನ್ನು ಸಮಾಜದ ಮುಖ್ಯ ವಾಹಿನಿಗೆ ಸೇರ್ಪಡೆಗೊಳಿಸಲು ಹಾಗೂ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ…

ರಾಜ್ಯದ ಸಾಲ 7,64,655 ಕೋಟಿ ರೂ.ಗೆ ಜಿಗಿತ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ಆಯವ್ಯಯವು 4.09 ಲಕ್ಷ ಕೋಟಿ ಗಾತ್ರದ್ದಾಗಿದೆ. ಇದರಲ್ಲಿ ಅವರು ಬರೋಬ್ಬರಿ 1.16 ಲಕ್ಷ ಕೋಟಿ ರೂ. ಸಾಲ ಪಡೆಯುವುದಾಗಿಯೂ ಘೋಷಿಸಿದ್ದಾರೆ. ಇದರಿಂದ ಕರ್ನಾಟಕದ ಒಟ್ಟು ಸಾಲ 2026ರ ಮಾರ್ಚ್‌ ಅಂತ್ಯಕ್ಕೆ 7,64,655 ಕೋಟಿ ರೂ.ಗೆ ಜಿಗಿಯಲಿದೆ. ಕೇಂದ್ರ ಸರ್ಕಾರದಿಂದ ಸಾಲ –…

ಬಿಸಿಸಿಐ `ಎ ಪ್ಲಸ್’ ಗುತ್ತಿಗೆಯಿಂದ ಕೊಹ್ಲಿ, ರೋಹಿತ್ ಔಟ್?

ಭಾರತ ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಹಲವು ಆಟಗಾರರಿಗೆ ಕೇಂದ್ರ ಗುತ್ತಿಗೆ ಒಪ್ಪಂದದಲ್ಲಿ ಎ ಪ್ಲಸ್ ಪಟ್ಟಿಯಿಂದ ಬಿಸಿಸಿಐ ಹಿಂಬಡ್ತಿ ನೀಡಲಿದೆಯೇ ಎಂಬ ಅನುಮಾನ ಉಂಟಾಗಿದೆ. ಬಿಸಿಸಿಐ ಸಾಮಾನ್ಯವಾಗಿ ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಐಪಿಎಲ್ ಟಿ-20 ಟೂರ್ನಿ ಆರಂಭಕ್ಕೂ ಮುನ್ನ ಬಿಡುಗಡೆ ಮಾಡುತ್ತಿತ್ತು. ಆದರೆ…

ರಫ್ತಿನಲ್ಲಿ ಕರ್ನಾಟಕ ದೇಶದಲ್ಲೇ ನಂ.1: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ರಫ್ತಿನಲ್ಲಿ ನಂ.1 ಸ್ಥಾನದಲ್ಲಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಳಿದರು. ಶುಕ್ರವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಕರ್ನಾಟಕದ ಸಾಧನೆಯನ್ನು ವಿವರಿಸಿದ ಅವರು, 4.4 ಬಿಲಿಯನ್ ಯುಎಸ್ಡಿ ಹೂಡಿಕೆ ಆಕರ್ಷಿಸಿದ ರಾಜ್ಯ ಸರ್ಕಾರ ದೇಶದಲ್ಲೇ ಬಂಡವಾಳ ಹೂಡಿಕೆ ಸೆಳೆಯುವಲ್ಲಿ ಮೂರನೇ…

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಸಮನ್ಸ್ ಜಾರಿಗೊಳಿಸಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಂಬಂಧವೇ…

108 ದೇಶಗಳಲ್ಲಿ 29,000 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಭಾರತೀಯರು!

108 ದೇಶಗಳಲ್ಲಿ 29 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಭಾರತೀಯ ತೆರಿಗೆ ಪಾವತಿದಾರರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಸುಮಾರು 30,161 ತೆರಿಗೆ ಪಾವತಿದಾರರು ವಿದೇಶಗಳಲ್ಲಿ ಆಸ್ತಿ ಘೋಷಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ 29 ಸಾವಿರ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಕೇಂದ್ರ ಹಣಕಾಸು ಸಚಿವಾಲಯ ಬ್ಯಾಂಕ್ ಖಾತೆ, ಷೇರು ಮಾರುಕಟ್ಟೆಯ ಡಿವಿಡೆಂಡ್…