ವಯೋ ವೃದ್ಧರಿಗಾಗಿ ‘ವಯೋ ವಂದನಾ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಆಯುμÁ್ಮನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಯೋ ವಂದನಾ ಯೋಜನೆಯು ಒಂದಾಗಿದ್ದು 70 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ರೂ.5 ಲಕ್ಷಗಳ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವ ಯೋಜನೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಸದಸ್ಯರಾದ ವೇದವ್ಯಾಸ ಕಾಮತ್ ಡಿ ಅವರ…
ಹೈಕೋರ್ಟ್ ಆದೇಶ ನಕಲಿ ಮಾಡಿ 70 ಲಕ್ಷ ರೂ. ವಂಚಿಸಿದ್ದ ಇಬ್ಬರ ಬಂಧನ
ಬೆಂಗಳೂರು:ಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂ. ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ವಿಚಾರಣೆಯನ್ನು ನಡೆಸಲಾಗಿದೆ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯನ್ನೇ ಹೋಲುವ ನಕಲಿ ಆದೇಶ ಪ್ರತಿ ತಯಾರಿಸುತ್ತಿದ್ದರು. ಅದನ್ನು ಬಳಸಿಕೊಂಡು ಅನೇಕರನ್ನು ವಂಚಿಸಿದ್ದರು. ಒಬ್ಬ ಆರೋಪಿಯಂತೂ, ತನ್ನ…
ಮಾಂಗಲ್ಯ ಧರಿಸದ ಮಹಿಳೆ ಮೇಲೆ ಗಂಡ ಯಾಕೆ ಆಸಕ್ತಿ ತೋರಬೇಕು? ನ್ಯಾಯಾಧೀಶರ ಪ್ರಶ್ನೆ
ಮಾಂಗಲ್ಯ ಧರಿಸಲ್ಲ, ಸಿಂಧೂರ ಹಾಕದ ನಿನ್ನ ಮೇಲೆ ಗಂಡ ಯಾಕೆ ಬೇಕು ಎಂದು ಸೆಷನ್ಸ್ ನ್ಯಾಯಾಧೀಶರೊಬ್ಬರು ವಿಚ್ಚೇದನ ಅರ್ಜಿಯ ವಿಚಾರಣೆ ವೇಳೆ ಪತ್ನಿಯನ್ನು ಪ್ರಶ್ನಿಸಿದ್ದಾರೆ. ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ ದಂಪತಿಯ ಪುಣೆ ಮೂಲದ ವಕೀಲ ಅಂಕುರ್ ಆರ್. ಜಹಗೀರ್ದಾರ್ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಪತಿ ನನಗೆ ಬೇಕು. ನನ್ನ ಬಗ್ಗೆ…
ಬೆಂಗಳೂರು ಸೇರಿ ದೇಶಾದ್ಯಂತ SDPI ಕಚೇರಿ ಮೇಲೆ ಇಡಿ ದಾಳಿ!
ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇತ್ತೀಚೆಗೆ ಎಸ್ ಡಿಪಿಐ ಮುಖಂಡ ಎಂಕೆ ಫೈಜಿ ಅವರನ್ನು ಬಂಧಿಸಿದ್ದ ಇಡಿ…
ಇಂಡಿಯಾವನ್ನು ಹಿಂದಿಯಾ ಮಾಡುತ್ತಿರುವ ಮೋದಿ ಸರ್ಕಾರ: ಕಮಲ್ ಹಾಸನ್ ಕಿಡಿ
ಚೆನ್ನೈ: ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಟೀಕಿಸಿರುವ ಮಕ್ಕಳ್ ನೀಧಿ ಮಯ್ಯಂ ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್, ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ವೈವಿಧ್ಯತೆ ದುರ್ಬಲಗೊಳಿಸಲಿದೆ ಎಂದು ಎಚ್ಚರಿಸಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಕಮಲ್ ಹಾಸನ್, ಈ ಕ್ರಮವು ಏಕರೂಪದ “ಹಿಂದಿಯಾ” ಮಾದರಿಯ ದೇಶದ…
ಔರಂಗಜೇಬ್ ಹೊಗಳಿದ ಶಾಸಕ ಅಬುಅಜ್ಮಿ ಅಮಾನತು
ಮುಂಬೈ: ಔರಂಗಜೇಬನನ್ನು ಹೊಗಳಿ ಭಾರೀ ಟೀಕೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಿಂದ ಬುಧವಾರ ಅಮಾನತು ಮಾಡಲಾಗಿದೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಮುಗಿಯುವವರೆಗೂ ಅವರನ್ನು ಅಮಾನತು ಮಾಡಲಾಗಿದೆ. ವಿಧಾನಸಭೆ ಅಧಿವೇಶನ ಮಾರ್ಚ್ ೨೬ರ ವರೆಗೆ ನಡೆಯಲಿದೆ. ಅಲ್ಲಿಯವರೆಗೂ ಅಬು ಅಜ್ನಿ ಅಮಾನತಿನಲ್ಲಿ ಇರಲಿದ್ದಾರೆ. ಸಚಿವ ಚಂದ್ರಕಾಂತ್…
Belagvai 3 ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾ ನಾಯಕ ಸ್ಟೀವನ್ ಸ್ಮಿತ್
ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಭಾರತ ವಿರುದ್ಧ…
ಮಾಹಿತಿ ಹಕ್ಕು ಕಸಿಯುತ್ತಿರುವ ಮೋದಿ ಸರಕಾರ: ಮಲ್ಲಿಕಾರ್ಜುನ ಖರ್ಗೆ ಆರೋಪ
ನವದೆಹಲಿ: ದತ್ತಾಂಶ ಸಂರಕ್ಷಣೆ ಹೆಸರಿನಲ್ಲಿ ಮೋದಿ ಸರ್ಕಾರ ಜನರಿಂದ ಮಾಹಿತಿ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಜನ ಸಾಮಾನ್ಯನ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಸರ್ವಾಧಿಕಾರದ ವಿರುದ್ಧ ಹೋರಾಡಲಿದೆ ಎಂದು ಅವರು ಹೇಳಿದರು. `ಒಂದೆಡೆ ಭಾರತವು ತಪ್ಪು ಮಾಹಿತಿ ಹಂಚಿಕೊಳ್ಳುವ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ದತ್ತಾಂಶ ಸಂರಕ್ಷಣೆ ಹೆಸರಿನಲ್ಲಿ…
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಕುಡಿಯುವ ನೀರು ಒದಗಿಸಲು ಕ್ರಮ: ಡಿಕೆ ಶಿವಕುಮಾರ್
ಬೆಂಗಳೂರು: ಎತ್ತಿನಹೊಳೆ ಯೋಜನೆಯಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶ್ರೀನಿವಾಸಪುರ ಶಾಸಕರಾದ ವಿಂಕಟಶಿವಾರೆಡ್ಡಿ ಜಿ.ಕೆ. ಇವರ ಪ್ರಶ್ನೆಗೆ ಉತ್ತಿರಿಸಿದ ಅವರು, ಎತ್ತಿನಹೊಳೆ ಯೋಜನೆಯಡಿಯ ಮೂಲ ಉದ್ದೇಶ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕುಡಿಯುವ ನೀರಿನ ಭವಣೆಯನ್ನು ನಿವಾರಿಸುವುದು ಹಾಗೂ ಅಂತರ್ಜಲ ಮಟ್ಟ ವೃದ್ಧಿಸುವುದು…