Kannadavahini

ಬಾರಿಸು ಕನ್ನಡ ಡಿಂಡಿಮವ

karnataka politics

ಎಚ್.ಡಿಕುಮಾರಸ್ವಾಮಿ ಸಂಕಷ್ಟ: ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ಮತ್ತೆ ರಾಜ್ಯಪಾಲರ ಮೊರೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬುಧವಾರ ವಿಶೇಷ ತನಿಖಾ ತಂಡ ರಾಜ್ಯಪಾಲರ ಅನುಮತಿ ಕೇಳಿದೆ. ಎಸ್ ಐಟಿ ಈ…

2028ರ ಚುನಾವಣೆಗೆ ಸಜ್ಜಾಗಿ: ಪರಾಜಿತ ಕೈ ಅಭ್ಯರ್ಥಿಗಳಿಗೆ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ ಎಂದು ಸೂಚನೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್…

ಮುಂದಿನ ಬಾರಿ ನನ್ನ ನಾಯಕತ್ವದಲ್ಲೇ ಚುನಾವಣೆ: ಡಿಕೆ ಶಿವಕುಮಾರ್ ಹೊಸ ಬಾಂಬ್

ಮುಂದಿನ ಬಾರಿ ನನ್ನ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ನನ್ನ ನಾಯಕತ್ವದಲ್ಲೇ ಚುನಾವಣೆ ನಡೆದಾಗ ಈ ಘೋಷಣೆ ಕೂಗಿ ಎಂದು ಡಿಕೆ, ಡಿಕೆ ಎಂದು ಸಭೆಯಲ್ಲಿ ಘೋಷಣೆ ಕೂಗಿದವರಿಗೆ ಸಲಹೆ…

ಬಿಆರ್ ಪಾಟೀಲ್ ಗೆ ಒಲಿದ ನೀತಿ ಯೋಜನಾ ಆಯೋಗದ ಅಧ್ಯಕ್ಷ: ಬಂಡಾಯ ಶಮನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿಆರ್ ಪಾಟೀಲ್ ​ಗೆ ಹೊಸ ಹುದ್ದೆ ನೀಡಿ ಅಸಮಾಧಾನ ಶಮನ ಮಾಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ…

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಸ್ಥಾನ ಭದ್ರ? ಸುರ್ಜೆವಾಲಾ ಸ್ಥಾನಕ್ಕೆ ಭೂಪೇಶ್ ನೇಮಕ?

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಬದಲಾವಣೆ ಮಾಡದೇ ಇರಲು ಎಐಸಿಸಿ ಚಿಂತನೆ ನಡೆಸಿದೆ ಎಂದು ಮೂಲಗಳು ದೃಢಪಡಿಸಿವೆ. ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶಾದ್ಯಂತ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆದಿದ್ದು, 8 ದಿನದಲ್ಲಿ ಎಲ್ಲಾ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದರಿಂದ ಕುತೂಹಲ ಮೂಡಿಸಿದ್ದ ರಾಜ್ಯಾಧ್ಯಕ್ಷರ ನೇಮಕ ರಾಜ್ಯಕ್ಕೆ ಅನ್ವಯ ಆಗುವುದಿಲ್ಲ ಎಂದು…

ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್: 72 ಗಂಟೆಯಲ್ಲಿ ಉತ್ತರಿಸದಿದ್ದರೆ ಶಿಸ್ತುಕ್ರಮದ ಎಚ್ಚರಿಕೆ!

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ಭಿನ್ನಮತ…

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ…

ಕುಮಾರಸ್ವಾಮಿಯನ್ನು ಮುಗಿಸಲು ಸಾಧ್ಯವಿಲ್ಲ: ಗುಡುಗಿದ ದೇವೇಗೌಡರು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ…

ಸಿಟಿ ರವಿ ವಿರುದ್ಧ ಸಭಾಪತಿ, ಪೊಲೀಸರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು: 30 ಬೆಂಬಲಿಗರು ಪೊಲೀಸ್ ವಶಕ್ಕೆ

ಬಿಜೆಪಿ ಸದಸ್ಯ ಸಿಟಿ ರವಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಪರಿಷತ್ ಸಭಾಪತಿ ಹಾಗೂ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನ ಪರಿಷತ್‌ನಲ್ಲಿಗುರುವಾರ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾಗ ತಮ್ಮನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್…

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸುವ ಪ್ರಸ್ತಾಪ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ ವಾಲ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯಲ್ಲಿನ ಪ್ರಸ್ತುತ ಭಿನ್ನಮತದ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಆದರೆ ಸಭೆಯಲ್ಲಿ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷದಿಂದ ಬದಲಾಯಿಸದೇ ಇರಲು ತೀರ್ಮಾನಿಸಿದೆ….