Kannadavahini

ಬಾರಿಸು ಕನ್ನಡ ಡಿಂಡಿಮವ

laxmi hebbalkar

ಸಿಟಿ ರವಿಗೆ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಿಂದನೆ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಬೆಳಗಾವಿ ವಿಧಾನಸಭೆ ಅಧಿವೇಶನದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ನಿಂದಿಸಿರುವುದು ಅಲ್ಲಿನ ಆಡಿಯೋ ಮತ್ತು ವೀಡಿಯೋದಲ್ಲಿ ದಾಖಲಾಗಿದ್ದು, ಇದು…

2ನೇ ಬಾರಿ ನೋಟಿಸ್ ಜಾರಿ ಬೆನ್ನಲ್ಲೇ ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!

ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಪೊಲೀಸರು ಮೊದಲ ಬಾರಿ ನೋಟಿಸ್ ನೀಡಿದ್ದಾಗ ವಿಚಾರಣೆಗೆ ಹಾಜರಾಗದ ಸಿಟಿ ರವಿಗೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನ ಸಿಐಡಿ ಕಚೇರಿಗೆ ಆಗಮಿಸಿ ವಿಚಾರಣೆ…

ಸಿಟಿ ರವಿ ನಿಂದನೆ ಪ್ರಕರಣ ಸಿಐಡಿ ತನಿಖೆ: ಗೃಹ ಸಚಿವ ಜಿ.ಪರಮೇಶ್ವರ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ನಿಂದಿಸಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ವಿಧಾನಪರಿಷತ್ ಕಲಾಪದಲ್ಲಿ ಅಶ್ಲೀಲ ಪದ ಬಳಸಿದ್ದಾರೆ ಎಂಬ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಐಡಿಗೆ…

ಯಾವುದೇ ಕಾರಣಕ್ಕೂ ಸಿಟಿ ರವಿ ಕ್ಷಮಿಸೋದೇ ಇಲ್ಲ: ಅಶ್ಲೀಲ ಪದದ ಸಾಕ್ಷ್ಯ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್

ಯಾವುದೇ ಕಾರಣಕ್ಕೂ ಸಿಟಿ ರವಿಯನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಇದು ಮಹಿಳಾ ಸಮುದಾಯಕ್ಕೆ ಮಾಡಿದ ಅಪಮಾನ. ನಾನು ಸಭಾಪತಿಗೆ ಮತ್ತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವೆ. ನನ್ನ ಬಳಿ ಸಾಕ್ಷಿಗಳಿವೆ. ಮಾಧ್ಯಮಗಳ ಬಳಿಯೂ ಇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಟಿಕಿ ಹೊಡೆದು ಸವಾಲು ಹಾಕಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ…

ಅವಾಚ್ಯ ಪದ ಬಳದಿದ್ದು ಸುಳ್ಳಾಗಿದ್ದರೆ ಸಿಟಿ ರವಿ ಬಂಧನ ಆಗುತ್ತಿತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಂಡ್ಯ: ಸಾಮಾನ್ಯವಾಗಿ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿ ಅವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬಿಜೆಪಿ ಮುಖಂಡರು ಬೆಂಬಲಿಸುತ್ತಿದ್ದಾರೆ. ಸಿಟಿ ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು…

BREAKING ಬೆಳಗಾವಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ಅರೆಸ್ಟ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಗುರುವಾರ ಅಂಬೇಡ್ಕರ್ ವಿಷಯದ ಮೇಲೆ ಚರ್ಚೆ ನಡೆಯುವ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಸಿಟಿ ರವಿ ತಮ್ಮ ವಿರುದ್ಧದ ಆರೋಪ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನಿಂದನೆ: ಬಿಜೆಪಿ ಎಂಎಲ್ ಸಿಟಿ ರವಿ ವಿರುದ್ಧ ಎಫ್ ಐಆರ್ ದಾಖಲು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಹೀರೇಬಾಗೇವಾಡಿ ಪೊಲೀಸರು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ದ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಗುರುವಾರ ವಿಧಾನಪರಿಷತ್ ನಲ್ಲಿ ಸಿಟಿ ರವಿ ತಮ್ಮನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಸಭಾಪತಿ ಬಸವರಾಜ ಹೊರಟ್ಟಿಗೆ ಅವರಿಗೆ ದೂರು ನೀಡಿದರು. ಸಭಾಪತಿಗೆ ದೂರು ನೀಡಿದ ನಂತರ ಹೀರೇಬಾಗೇಸವಾಡಿ…

ಸಿಟಿ ರವಿ ವಿರುದ್ಧ ಸಭಾಪತಿ, ಪೊಲೀಸರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು: 30 ಬೆಂಬಲಿಗರು ಪೊಲೀಸ್ ವಶಕ್ಕೆ

ಬಿಜೆಪಿ ಸದಸ್ಯ ಸಿಟಿ ರವಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಪರಿಷತ್ ಸಭಾಪತಿ ಹಾಗೂ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನ ಪರಿಷತ್‌ನಲ್ಲಿಗುರುವಾರ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾಗ ತಮ್ಮನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್…

ಬೆಳಗಾವಿ ಸುವರ್ಣ ಸೌಧಕ್ಕೆ ಬರಲಿರುವ 100 ‘ಗೃಹಲಕ್ಷ್ಮೀ’ಯರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸರಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಯಶಸ್ಸಾಗಿದೆ. ಹಲವು ಜನ ಫಲಾನುಭವಿಗಳು ಸರಕಾರವನ್ನು ಹರಸುತ್ತಿದ್ದಾರೆ. ನಾಳೆ (ಬುಧವಾರ) 100 ಜನ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಸುವರ್ಣಸೌಧಕ್ಕೆ ಬರುತ್ತಿದ್ದಾರೆ. ಅವರೊಂದಿಗೆ ಸಮಯ ಕಳೆಯುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಳಿಗೆ ಊಟವನ್ನು ಗೃಹಲಕ್ಷ್ಮೀ…

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ: ಅಕ್ಟೋಬರ್ 7, 9ರಂದು 2 ತಿಂಗಳ ಹಣ ಜಮೆ

ದಸರಾ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, 2 ತಿಂಗಳ ಬಾಕಿಯನ್ನು ಅಕ್ಟೋಬರ್ 7 ಮತ್ತು 9ರಂದು ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ನವರಾತ್ರಿ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗೃಹಲಕ್ಷ್ಮೀ ಹಣವನ್ನು ಮುಂದಿನ…