ರೈಲು ಹೈಜಾಕ್ ಮಾಡಿದ್ದ 27 ಬಂಡುಕೋರರ ಹತ್ಯೆಗೈದ ಪಾಕಿಸ್ತಾನ ಸೇನೆ; 150 ಒತ್ತೆಯಾಳುಗಳ ರಕ್ಷಣೆ!
ರೈಲು ಹೈಜಾಕ್ ಮಾಡಿದ್ದ 27 ಬಲೂಚಿಸ್ತಾನದ ಬಂಡುಕೋರರನ್ನು ಹತ್ಯೆ ಮಾಡಿದ ಪಾಕಿಸ್ತಾನದ ಸೇನೆ 150 ಒತ್ತೆಯಾಳುಗಳನ್ನು ರಕ್ಷಿಸಿದೆ. ಪಾಕಿಸ್ತಾನ ಪೇಶಾವರಕ್ಕೆ ಹೊರಟ್ಟಿದ್ದ ಜಾಫರ್ ರೈಲನ್ನು ನಿನ್ನೆ ಅಪಹರಿಸಿದ್ದ ಬಂಡುಕೋರರು ಬಲೂಚಿಸ್ತಾನಕ್ಕೆ ಕೊಂಡೊಯ್ದಿದ್ದರು. ಮಂಗಳವಾರ ರಾತ್ರಿ ಪೂರ್ಣ ಪ್ರಮಾಣದ ಸೇನೆ ಬಳಸಿ ಮಿಂಚಿನ ಕಾರ್ಯಾಚರಣೆ ನಡೆಸಿದ ಪಾಕಿಸ್ತಾನ 27 ಬಂಡುಕೋರರನ್ನು ಕೊಂದು 150 ಪ್ರಯಾಣಿಕರನ್ನು ರಕ್ಷಿಸಿದೆ. ಒತ್ತೆಯಾಳುಗಳಾಗಿ…
ಪಾಕಿಸ್ತಾನದ ರೈಲು ಹೈಜಾಕ್: 11 ಯೋಧರ ಹತ್ಯೆ, 180 ಪ್ರಯಾಣಿಕರ ಒತ್ತೆ!
ಇಸ್ಲಾಮಾಬಾದ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಂಡುಕೋರರು ಪ್ರಯಾಣಿಕ ರೈಲನ್ನು ಹೈಜಾಕ್ ಮಾಡಿ ನೂರಾರು ಪ್ರಯಾಣಿಕರನ್ನು ಒತ್ತೆಯಾಳನ್ನಾಗಿ ಮಾಡಿಕೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಬೇರ್ಪಡಿಸಿ ಪ್ರತ್ಯೇಕ ರಾಷ್ಟ್ರವಾಗಿ ಘೋಷಿಸುವಂತೆ ಆಗ್ರಹಿಸಿ ಬಲೂಚಿಸ್ತಾನ ಲಿಬರಲ್ ಆರ್ಮಿ [ಬಿಎಲ್ ಎ] ರೈಲನ್ನು ಹೈಜಾಕ್ ಮಾಡಿದ್ದು, ಪಾಕಿಸ್ತಾನ ಸೇನೆಯ 11 ಮಂದಿಯನ್ನು ಹತ್ಯೆಗೈಯ್ಯಲಾಗಿದ್ದು, 180ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದೆ….
100 ಕೋಟಿ ರೂ. ವೆಚ್ಚದಲ್ಲಿ ಪಾಕಿಸ್ತಾನದಲ್ಲಿ ಹಿಂದೂ ದೇಗುಲಗಳ ನವೀಕರಣ
ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರವು 1 ಶತಕೋಟಿ ರೂಪಾಯಿ ವೆಚ್ಚದಲ್ಲಿ ದೇಶದ ದೇವಾಲಯಗಳು ಮತ್ತು ಗುರುದ್ವಾರಗಳ ನವೀಕರಣ ಮತ್ತು ಸೌಂದರ್ಯೀಕರಣಕ್ಕಾಗಿ ಬೃಹತ್ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇವಾಕ್ಯುಯಿ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮುಖ್ಯಸ್ಥ ಸೈಯದ್ ಅತ್ತಾವುರ್ ರೆಹಮಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. “ಮಾಸ್ಟರ್ ಪ್ಲಾನ್ ಅಡಿಯಲ್ಲಿ, ದೇವಾಲಯಗಳು ಮತ್ತು ಗುರುದ್ವಾರಗಳನ್ನು ಅಲಂಕರಿಸಲಾಗುವುದು…
14,000 ರನ್ ಗಡಿ ದಾಟಿ ಹೊಸ ದಾಖಲೆ ಬರೆದ ಕೊಹ್ಲಿ!
ಸ್ಪಿನ್ನರ್ ಗಳ ಎದುರು ರನ್ ಗಳಿಸಲು ಪರದಾಟ ನಡೆಸಿರುವ ನಡುವೆಯೇ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 14,000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ವಿರುದ್ಧ ಈ ದಾಖಲೆ ಬರೆಯುವ ಮೂಲಕ ಅವಿಸ್ಮರಣೀಯ ಸಾಧನೆ ಮಾಡಿದ್ದಾರೆ. ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ…
ಪಾಕಿಸ್ತಾನ ವಿರುದ್ಧ ದಾಖಲೆ ಬರೆದ ವಿರಾಟ್ ಕೊಹ್ಲಿ: ಈ ಸಾಧನೆ ಮಾಡಿದ ಮೊದಲಿಗ!
ಬ್ಯಾಟಿಂಗ್ ನಲ್ಲಿ ಹಲವು ದಾಖಲೆ ಬರೆದಿರುವ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಫಿಲ್ಡಿಂಗ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ದುಬೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಕುಶ್ದಿಲ್ ಶಾಹ ಕ್ಯಾಚ್ ಪಡೆಯುವ ಮೂಲಕ ವಿರಾಟ್ ಕೊಹ್ಲಿ ಮೈದಾನದಲ್ಲಿ ಫೀಲ್ಡಿಂಗ್ ವೇಳೆ 158 ಕ್ಯಾಚ್ ಪಡೆದರು. ಈ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಫೀಲ್ಡಿಂಗ್…
ಪಾಕಿಸ್ತಾನಕ್ಕೆ ನೌಕಾನಲೆಯ ಮಾಹಿತಿ ನೀಡುತ್ತಿದ್ದ ಕಾರವಾರದ ಎನ್ ಐಎ ಅಧಿಕಾರಿ ಅರೆಸ್ಟ್!
ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ ಬಂಧಿತ ಆರೋಪಿಗಳಾಗಿದ್ದಾರೆ. ಸೋಮವಾರವೇ ಕಾರವಾರದಲ್ಲಿ ಬೀಡು ಬಿಟ್ಟಿದ್ದ ಹೈದರಾಬಾದಿನಿಂದ ಬಂದ ಎನ್ಐಎ ಅಧಿಕಾರಿಗಳ ತಂಡವು ರಾತ್ರಿಯವರೆಗೂ ನಗರ…
ಗುಜರಾತ್ ನಲ್ಲಿ ಸಿಕ್ಕಿಬಿದ್ದ 8 ಪಾಕಿಸ್ತಾನಿಯರಿಗೆ 20 ವರ್ಷ ಜೈಲು!
232 ಕೆಜಿ ತೂಕದ ಡ್ರಗ್ಸ್ ಕಳ್ಳಸಾಗಾಟ ಮಾಡುತ್ತಿದ್ದಾಗ ಗುಜರಾತ್ ಕಡಲತೀರದಲ್ಲಿ ಸಿಕ್ಕಿಬಿದ್ದ 8 ಪಾಕಿಸ್ತಾನಿಯಿರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2015ರಲ್ಲಿ 7 ಕೋಟಿ ರೂ. ಮೌಲ್ಯದ 232 ಕೆಜಿ ಡ್ರಗ್ಸ್ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ 8 ಪಾಕಿಸ್ತಾನಿಯರಿಗೆ ಗುಜರಾತ್ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 11 ಡ್ರಮ್…
ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಸರಣಿ ವಾಯುದಾಳಿ: 15 ಮಂದಿ ಸಾವು
ಆಫ್ಘಾನಿಸ್ತಾನದ ಪಕ್ವಿಕಾ ವಲಯದ ಮೇಲೆ ಪಾಕಿಸ್ತಾನದ ದಿಢೀರನೆ ಸರಣಿ ವಾಯುದಾಳಿ ನಡೆಸಿದ್ದು, ಕನಿಷ್ಠ 15 ಮಂದಿ ಅಸುನೀಗಿದ್ದಾರೆ. ಡಿಸೆಂಬರ್ 24ರಂದು ರಾತ್ರಿ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸುಮಾರು 7 ಗ್ರಾಮಗಳನ್ನು ಕೇಂದ್ರೀಕರಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದ್ದು, ಲಮನ್…
Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ಮತ್ತು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಬೆಂಬಲಿಗರು ಬೀದಿಗಿಳಿದು ನಡೆಸುತ್ತರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಾಲ್ವರು ಸೈನಿಕರು ಸೇರಿದಂತೆ 5 ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನಾಕಾರರು ಸೋಮವಾರ ತಡರಾತ್ರಿ ರಾಜಧಾನಿ ಇಸ್ಲಾಮಾಬಾದ್ ಗೆ…
ಪಾಕಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ: 24 ಮಂದಿ ಸಾವು
ಆತ್ಮಾಹುತಿ ದಳ ಬಲೂಚಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿದ್ದರಿಂದ 24 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಭೀಕರ ಘಟನೆ ಪಾಕಿಸ್ತಾನದಲ್ಲಿ ಶನಿವಾರ ನಡೆದಿದೆ. ಜನರಿಂದ ತುಂಬಿ ತುಳುಕುತ್ತಿದ್ದ ಕ್ವೆಟ್ಟಾದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆಸಲಾಗಿದೆ. ಬಾಂಬ್ ಸಿಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರೈಲ್ವೆ ಫ್ಲಾಟ್ ಫಾರಂ ಪೂರ್ತಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ…