ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು, 40 ಕೋಟಿ ದಂಡ
ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು,ಅಕ್ರಮ…