ಚೆನ್ನೈ: ಕಾವೇರಿ ಪ್ರಾಧಿಕಾರದ ಸೂಚನೆಯಂತೆ ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆಗೆ ಸುಪ್ರೀಂಕೋರ್ಟ್ ಮೊರೆ ಹೋಗಲು ತಮಿಳುನಾಡು ಸರ್ವಪಕ್ಷ ಸಭೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಮಳೆ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಸೂಚಿಸಿದಂತೆ ಜುಲೈ ಅಂತ್ಯದವರೆಗೆ ಪ್ರತಿದಿನ 1 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ. 11000 ಕ್ಯೂಸೆಕ್ಸ್ ಬದಲು 8000 ಕ್ಯೂಸೆಕ್ಸ್ ನೀರು ಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡಿತ್ತು.
ಕರ್ನಾಟಕದ ತೀರ್ಮಾನದ ಬೆನ್ನಲ್ಲೇ ಮಂಗಳವಾರ ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸರ್ವಪಕ್ಷ ಸಭೆ ಕರೆದಿದ್ದು, ಕರ್ನಾಟಕ ಸರ್ಕಾರದ ತೀರ್ಮಾನವನ್ನು ಖಂಡಿಸಿದ್ದು, ನೀರು ಬಿಡದೇ ಇರುವ ತೀರ್ಮಾನದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ.
ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೆಟ್ಟೂರು ಜಲಾಶಯಕ್ಕೆ ನಿತ್ಯ ಕನಿಷ್ಠ 1 ಟಿಎಂಸಿ ನೀರು ಬಿಡುಗಡೆ ಮಾಡಲು ಸೂಚಿಸುವಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ.