Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

8.7 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ; 55 ಕಂಪನಿಗಳ ಜತೆ 85 ಒಪ್ಪಂದಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 2 ವೀಕ್ಷಣೆಗಳು
hdk

ನವದೆಹಲಿ: ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2 ಪ್ರಾರಂಭಿಸಿದೆ.

ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಯೋಜನೆಗೆ ಚಾಲನೆ ನೀಡಿದ್ದು, ಇದು ಹೆಚ್ಚಿನ ಮೌಲ್ಯದ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ಗುಣಮಟ್ಟದ, ವಿವಿಧ ಶ್ರೇಣಿಗಳ ಉಕ್ಕಿನ ಆಮದು ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ಪರಿಣಾಮಕಾರಿ ಎಂದು ಹೇಳಿದ್ದಾರೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪಿಎಲ್ಐ 1.2 ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಕೇಂದ್ರ ಸಚಿವರ ಸಮಕ್ಷಮದಲ್ಲಿ ಉಕ್ಕು ಉದ್ಯಮದ ಪ್ರಮುಖ ಪಾಲುದಾರರೊಂದಿಗೆ ತಿಳಿವಳಿಕೆ ಒಪ್ಪಂದಗಳಿಗೆ (MoU) ಸಹಿ ಹಾಕಲಾಯಿತು. ಇದು ಭಾರತದ ಉಕ್ಕು ಉದ್ಯಮದ ದೀರ್ಘಕಾಲೀನ ಬೆಳವಣಿಗೆಯ ನಿರೀಕ್ಷೆಗಳಲ್ಲಿ ಬಲವಾದ ವಿಶ್ವಾಸವನ್ನು ಮೂಡಿಸುತ್ತದೆ ಎಂದು ಸಚಿವರು ಹೇಳಿದರು.

ಪಿಎಲ್ಐ 1.2 ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುವ ಹಾಗೂ ಉಕ್ಕು ಉದ್ಯಮದಲ್ಲಿ ಸ್ವಾವಲಂಭನೆ ಸಾಧಿಸುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆಯಾಗಿದೆ. ಅಲ್ಲದೆ, ಜಾಗತಿಕವಾಗಿ ಸ್ಪರ್ಧಾತ್ಮಕ ಶಕ್ತಿಯನ್ನು ಹೊಂದಿ ದೇಶದಲ್ಲಿ ಪೂರಕ ವ್ಯವಸ್ಥೆಯನ್ನು ನಿರ್ಮಿಸುವತ್ತ ಒಂದು ನಿರ್ಣಾಯಕ ಉಪಕ್ರಮವಾಗಿದೆ ಎಂದು ಅವರು ಒತ್ತಿ ಹೇಳಿದರು.

ಈ ಯೋಜನೆಯು ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತಕ್ಕೆ ಅನುಗುಣವಾಗಿದ್ದು, ರಾಷ್ಟ್ರೀಯ ಆದ್ಯತೆಗಳಿಗೆ ತಕ್ಕಂತೆ ಉಕ್ಕು ಉದ್ಯಮವನ್ನು ಮುನ್ನಡೆಸುತ್ತದೆ ಎಂದು ಅವರು ಪ್ರತಿಪಾದಿಸಿದರು.

ಪಿಎಲ್ಐ ಯೋಜನೆ 1.2ರ ಅಡಿಯಲ್ಲಿ 85 ಒಪ್ಪಂದಗಳಿಗೆ 55 ಕಂಪನಿಗಳೊಂದಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದ್ದು, ₹11,887 ಕೋಟಿ ಹೂಡಿಕೆ ಮಾಡಲಾಗಿದೆ. ಈ ಯೋಜನೆಗಳು 2031ರ ಹಣಕಾಸು ವರ್ಷದ ವೇಳೆಗೆ 8.7 ಮಿಲಿಯನ್ ಟನ್ ವಿಶೇಷ ಉಕ್ಕಿನ ಉತ್ಪಾದನಾ ಸಾಮರ್ಥ್ಯವನ್ನು ಹೊಂದುವ ನಿರೀಕ್ಷೆಯಿದೆ. ಇದು ಶಕ್ತಿಶಾಲಿ ಉಕ್ಕು, ಮಿಶ್ರಲೋಹ ಮತ್ತು ಸ್ಟೇನ್‌ಲೆಸ್ ಸ್ಟೀಲ್‌ಗಳು, ಲೇಪಿತ ಉತ್ಪನ್ನಗಳು ಮತ್ತು ವಿವಿಧ ರಾಷ್ಟ್ರೀಯ ವ್ಯೂಹಾತ್ಮಕ ವಲಯಗಳಿಗೆ ಅಗತ್ಯವಿರುವ ಅತ್ತುತ್ತಮ ಶ್ರೇಣಿಯ ಉನ್ನತ ಗುಣಮಟ್ಟದ ಉಕ್ಕು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

ಆಟೋಮೊಬೈಲ್, ರೇಲ್ವೆ, ರಕ್ಷಣೆ, ವಿದ್ಯುತ್ ವಲಯಗಳ ಉಪಕರಣಗಳ ತಯಾರಿಕೆಗೆ ಮತ್ತು ಏರೋಸ್ಪೇಸ್ ಸೇರಿದಂತೆ ವಿವಿಧ ಪ್ರಮುಖ ಕ್ಷೇತ್ರಗಳಿಗೆ ಅಗತ್ಯವಾದ ವಿಶೇಷ ಉಕ್ಕಿನ ಮೂಪಕ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವತ್ತ ಅಗತ್ಯ ಸಹಕಾರ, ಸಹಯೋಗ ನೀಡುತ್ತದೆ. ಕೈಗಾರಿಕಾ ಬೇಡಿಕೆಗೆ ತಕ್ಕಂತೆ ಪಿಎಲ್ಐ ಯೋಜನೆಯ ಮೂರನೇ ಸುತ್ತನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಯೋಜನೆಯ ವಿಶಾಲ ಪರಿಣಾಮದ ಕುರಿತು ಮಾತನಾಡಿದ ಸಚಿವರು; ಪಿಎಲ್ಐ 1.2 ದೇಶೀಯ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಮೂಲಕ ವಿದೇಶಿ ವಿನಿಮಯವನ್ನು ಸಂರಕ್ಷಿಸುವ ಮೂಲಕ ಭಾರತವನ್ನು ಸುಧಾರಿತ ಉಕ್ಕಿನ ವಿಶ್ವಾಸಾರ್ಹ ಜಾಗತಿಕ ಪೂರೈಕೆದಾರನಾಗಿ ಹೊರಹೊಮ್ಮಿಸುವ ದಿಕ್ಕಿನಲ್ಲಿ ರಚನಾತ್ಮಕವಾಗಿ ಕೆಲಸ ಮಾಡುತ್ತದೆ ಎಂದರು ಅವರು ಪಾಲುದಾರರಿಗೆ ತಿಳಿಸಿದರು.

ಹಿಂದಿನ ಸುತ್ತಿನ ಎರಡು ಪಿಎಲ್ಐ ಯೋಜನೆಗಳು ಉಕ್ಕು ಉದ್ಯಮದ ನಿರೀಕ್ಷೆಗಳನ್ನು ಪೂರೈಸಿ ರಾಷ್ಟ್ರಕ್ಕೆ ಅನುಕೂಲ ಮಾಡಿವೆ. ಅದರಂತೆಯೇ ಪಿಎಲ್ಐ 1.0 ಮತ್ತು 1.1ರಲ್ಲಿ, ₹43,874 ಕೋಟಿಯಷ್ಟು ನಿಗದಿತ ಹೂಡಿಕೆಗಳು ಈಗಾಗಲೇ ಗುರಿ ಸಾಧಿಸಿವೆ. ಪಿಎಲ್ಐ 1.2 ಯೋಜನೆ ಹಿಂದಿನ ಫಲಿತಾಂಶ ಉತ್ತೇಜನಕಾರಿ ಮುನ್ನಡೆಯಿಂದ ಪ್ರೇರಿತಗೊಂಡು ರೂಪಿಸಲ್ಪಟ್ಟಿದೆ. ದೇಶೀಯ ಉಕ್ಕಿನ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಸಂಪೂರ್ಣ ಮೌಲಿಕ ಸರಪಳಿಯನ್ನು ಗಟ್ಟಿಗೊಳಿಸುವ ಕೆಲಸವನ್ನು ಅದು ಮಾಡುತ್ತದೆ ಎಂದು ಸಚಿವರು ವಿವರಿಸಿದರು.

ಈ ಸಂದರ್ಭದಲ್ಲಿ ಉಕ್ಕು ಸಚಿವಲಾಯದ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳು ಹಾಜರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment