Sunday, June 14, 2026
Google search engine
Homeರಾಜ್ಯವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯಲ್ಲೇ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಶಿಕ್ಷಕ ಧನಂಜಯ್ (51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ ಸಂದರ್ಭದಲ್ಲಿ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಿ ತಾನು ತರಗತಿ ಕೊಠಡಿ ಕಿಟಕಿ ಹಾಕಿ‌ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿಗಳು ಶಾಲೆ ಕಟ್ಟೆಯ ಮೇಲೆ ಕುಳಿತಿರುವುದನ್ನು ನೋಡಿದ ಇತರೆ ಶಿಕ್ಷಕರು ಬಾಗಿಲು ಹಾಕಿದ್ದ ಕೊಠಡಿಯ ಬಾಗಿಲು ತೆರೆಯುವುದಕ್ಕೆ ಪ್ರಯತ್ನಿಸಿ ವಿಫಲರಾಗಿದ್ದು, ನಂತರ ಕಿಟಕಿಯನ್ನು ತೆಗೆದಾಗ ಶಿಕ್ಷಕ ತರಗತಿ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೂಲತಃ ಹೊನ್ನಾಳಿ ತಾಲೂಕಿನ ಜೀನಳ್ಳಿ ಗ್ರಾಮದ ನಿವಾಸಿಯಾಗಿದ್ದ,‌ ಶಿಕ್ಷಕ ಧನಂಜಯ್ ಹೊನ್ನಾಳಿಯಲ್ಲಿ ವಾಸವಿದ್ದರು. ಬಿಎಲ್ ಒ ಕೆಲಸದ ಒತ್ತಡದಿಂದ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪತ್ನಿ ಆಶಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆ ಸಂಬಂಧಿಸಿದಂತೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments