ಮಧ್ಯಮ ವೇಗಿ ಅರ್ಷದೀಪ್ ಸಿಂಗ್ ಮಾರಕ ದಾಳಿ ಹಾಗೂ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಅವರ ಮಹತ್ವದ ಜೊತೆಯಾಟದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಕೆನಡಾ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಸೂಪರ್-8 ಪ್ರವೇಶಿಸಿದೆ.
ನ್ಯೂಯಾರ್ಕ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿದ ಭಾರತ ತಂಡ, ಆತಿಥೇಯ ಅಮೆರಿಕ ತಂಡವನ್ನು 20 ಓವರ್ ಗಳಲ್ಲಿ 8 ವಿಕೆಟ್ ಗೆ 110 ರನ್ ಗಳಿಗೆ ನಿಯಂತ್ರಿಸಿತು. ಸ್ಪರ್ಧಾತ್ಮಕ ಗುರಿ ಬೆಂಬತ್ತಿದ ಭಾರತ ತಂಡ 7 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಈ ಗೆಲುವಿನೊಂದಿಗೆ ಭಾರತ ಹ್ಯಾಟ್ರಿಕ್ ಗೆಲುವಿನೊಂದಿಗೆ ಎ ಗುಂಪಿನಲ್ಲಿ 6 ಅಂಕದೊಂದಿಗೆ ಅಗ್ರಸ್ಥಾನ ಪಡೆಯುವ ಮೂಲಕ ಸೂಪರ್-8ಗೆ ಪ್ರವೇಶಿಸಿತು.
ಭಾರತ ತಂಡ ವಿರಾಟ್ ಕೊಹ್ಲಿ (0) ಮತ್ತು ನಾಯಕ ರೋಹಿತ್ ಶರ್ಮ (3) ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ರಿಷಭ್ ಪಂತ್ (18) ಮೂರನೇ ವಿಕೆಟ್ ಗೆ 29 ರನ್ ಜೊತೆಯಾಟದಿಂದ ತಂಡವನ್ನು ಕುಸಿತದಿಂದ ಪಾರು ಮಾಡಲು ಯತ್ನಿಸಿದರು.
ರಿಷಭ್ ಪಂತ್ ಔಟಾದ ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಮುರಿಯದ 4ನೇ ವಿಕೆಟ್ ಗೆ 67 ಜೊತೆಯಾಟದಿಂದ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು. ಸೂರ್ಯಕುಮಾರ್ 49 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ ಅರ್ಧಶತಕ ಬಾರಿಸಿದರೆ, ದುಬೆ 35 ಎಸೆತಗಳಲ್ಲಿ 1 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 31 ರನ್ ಬಾರಿಸಿ ಔಟಾಗದೇ ಉಳಿದರು.
ಪಾಕಿಸ್ತಾನ ವಿರುದ್ಧ ಅಮೋಘ ಪ್ರದರ್ಶನ ನೀಡಿದ್ದ ಕರ್ನಾಟಕದ ವೇಗಿ ಅಮೆರಿಕ ಪರ ನೇತ್ರವಾಲ್ಕರ್ 2 ವಿಕೆಟ್ ಪಡೆದು ಮಿಂಚಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಅಮೆರಿಕ ತಂಡವನ್ನು ಅರ್ಷದೀಪ್ ಸಿಂಗ್ 4 ವಿಕೆಟ್ ಪಡೆಯುವ ಮೂಲಕ ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕಿದರು. ಅಮೆರಿಕ ಪರ ಸ್ಟೀವನ್ ಟೇಲರ್ (24), ನಿತಿಶ್ ಕುಮಾರ್ (27), ಕೋರೆ ಆಂಡರ್ಸನ್ (15) ಉತ್ತಮ ಮೊತ್ತ ದಾಖಲಿಸಲು ನೆರವಾದರು.