Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

ವೆಸ್ಟ್ ಇಂಡೀಸ್ ವಿರುದ್ಧ 2-0 ಸರಣಿ ವಶ: ವಿಶ್ವದಾಖಲೆ ಬರೆದ ಟೀಂ ಇಂಡಿಯಾ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 14 ವೀಕ್ಷಣೆಗಳು

ಭಾರತ ತಂಡ 7 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯಿಂದ ಗೆದ್ದು ವಿಶ್ವದಾಖಲೆಯನ್ನು ಸರಿಗಟ್ಟಿದೆ.

ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 121 ರನ್ ಗಳ ಗುರಿ ಪಡೆದಿದ್ದ ಭಾರತ ತಂಡ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಈ ಗೆಲುವಿನೊಂದಿಗೆ ಭಾರತ ಒಂದು ತಂಡದ ವಿರುದ್ಧ ಅತೀ ಹೆಚ್ಚು ಸತತ ಸರಣಿ ಗೆಲುವು ದಾಖಲಿಸಿದ ದಾಖಲೆಗೆ ಪಾತ್ರವಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸತತ 10 ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ. ಇದೇ ತಂಡದ ವಿರುದ್ಧ ದಕ್ಷಿಣ ಆಫ್ರಿಕಾ 10 ಸರಣಿ ಗೆದ್ದು ವಿಶ್ವದಾಖಲೆ ಬರೆದಿತ್ತು.

ಭಾರತ 2002ರಿಂದ ಸತತವಾಗಿ ಸರಣಿ ಗೆದ್ದುಕೊಂಡು ಬಂದರೆ, ದ.ಆಫ್ರಿಕಾ 1997-2024ರ ನಡುವೆ ಈ ಸಾಧನೆ ಮಾಡಿತ್ತು.

ಆಸ್ಟ್ರೇಲಿಯಾ ತಂಡ ಸತತ 9 ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಮೂರನೇ ಸ್ಥಾನದಲ್ಲಿದೆ. ಇದೇ ಆಸ್ಟ್ರೇಲಿಯಾ, ಇಂಗ್ಲೆಂಡ್ ತಂಡವನ್ನು ಸತತ 8 ಸರಣಿಯಲ್ಲಿ ಸೋಲಿಸಿದ ದಾಖಲೆ ಹೊಂದಿದೆ. ಜಿಂಬಾಬ್ವೆ ವಿರುದ್ಧ ಶ್ರೀಲಂಕಾ 8 ಸರಣಿ ಗೆದ್ದು ನಂತರದ ಸ್ಥಾನದಲ್ಲಿದೆ.

ಶುಭಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ಗೆದ್ದ ಮೊದಲ ಟೆಸ್ಟ್ ಸರಣಿ ಇದಾಗಿದೆ. ಮೊದಲ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಅಂತರದಿಂದ ಗೆದ್ದಿದ್ದ ಭಾರತ ಎರಡನೇ ಇನಿಂಗ್ಸ್ ನಲ್ಲಿ ಫಾಲೋಆನ್ ಹೇರಿತ್ತು. ಆದರೆ ಅನಿರೀಕ್ಷಿತ ಹೋರಾಟ ನಡೆಸಿದ ವೆಸ್ಟ್ ಇಂಡೀಸ್ 270 ರನ್ ಗಳ ಹಿನ್ನಡೆ ತಪ್ಪಿಸಿಕೊಂಡಿದ್ದೂ ಅಲ್ಲದೇ ಭಾರತಕ್ಕೆ 121 ರನ್ ಗುರಿ ಒಡ್ಡಿತ್ತು.

ಭಾರತದ ಪರ ಕೆಎಲ್ ರಾಹುಲ್ 108 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ನೆರವನಿಂದ 58 ರನ್ ಬಾರಿಸಿ ಅಜೇಯರಾಗಿ ಉಳಿದರು. ಸಾಯಿ ಸುದರ್ಶನ್ 39 ಮತ್ತು ಗಿಲ್ 13 ರನ್ ಗಳಿಸಿದರು.

3ನೇ ಸ್ಥಾನದಲ್ಲಿ ಉಳಿದುಕೊಂಡ ಭಾರತ

ಭಾರತ ಸರಣಿ ಗೆಲುವಿನ ಹೊರತಾಗಿಯೂ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲೇ ಉಳಿದುಕೊಂಡಿತು.

ಭಾರತ 7 ಪಂದ್ಯಗಳಿಂದ 4 ಜಯ ಹಾಗೂ 2 ಸೋಲಿನೊಂದಿಗೆ 61.90 ಅಂಕ ಸಂಪಾದಿಸಿ ಮೂರನೇ ಸ್ಥಾನ ಪಡೆದರೆ, ಆಸ್ಟ್ರೇಲಿಯಾ ಆಡಿದ 3 ಪಂದ್ಯಗಳನ್ನೂ ಗೆದ್ದು 100 ಅಂಕದೊಂದಿಗೆ ಅಗ್ರಸ್ಥಾನದಲ್ಲಿದೆ. ಶ್ರೀಲಂಕಾ ತಂಡ 2 ಪಂದ್ಯಗಳಿಂದ 1 ಜಯ ಹಾಗೂ 1 ಸೋಲಿನೊಂದಿಗೆ 66.67 ಅಂಕ ಪಡೆದು ಎರಡನೇ ಸ್ಥಾನ ಕಾಯ್ದುಕೊಂಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment