ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಮಧ್ಯಂತರ ತಡೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ ಅರ್ಜಿಯ ವಿಚಾರಣೆ ತಾಂತ್ರಿಕ ಕಾರಣದಿಂದ ಆಗಸ್ಟ್ 30ಕ್ಕೆ ಮುಂದೂಡಿಕೆಯಾಗಿದೆ.
ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಸಿಐಡಿ ಎಸ್‌ಪಿಪಿ ಎಸ್‌ಪಿಪಿ ಅಶೋಕ್ ನಾಯ್ಕ್ ಅವರಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಳ್ಳಬೇಕಿತ್ತು.
ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಪೀಠ ಬಿಎಸ್ವೈ ಪರ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಅರ್ಜಿ ವಿಚಾರಣೆ ಗುರುವಾರ ನಡೆಯಬೇಕಿತ್ತು. ತಾಂತ್ರಿಕ ಕಾರಣದಿಂದ ಲಿಸ್ಟ್ ಆಗಿಲ್ಲ. ಮಧ್ಯಾಹ್ನ 2.30ಕ್ಕೆ ವಕೀಲರು ಮನವಿ ಮಾಡಿ. ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ಇದೆ. ಅದಕ್ಕೆ ನೀವು ಚಾರ್ಜ್ ಶೀಟ್ ವಜಾಕ್ಕೆ ಕೇಳಲು ಆಗಲ್ಲ. ಎಫ್ ಐಆರ್ ಅರ್ಜಿ ರದ್ದು ಮಾಡುವ ಅರ್ಜಿ ವಾಪಸ್ ತೆಗೆದುಕೊಂಡು, ಚಾರ್ಜ್ ಶೀಟ್ ವಜಾಗೊಳಿಸಲು 482ಎ ಅಡಿ ಬೇರೆ ಅರ್ಜಿ ಸಲ್ಲಿಸಿ ಎಂದರು.