ಬೈಕ್ ಮೇಲೆ ಲಾರಿ ಹರಿದ ಪರಿಣಾಮ ಕಿರುತೆರೆ ನಟ ಅಮನ್ ಜೈಸ್ವಾಲ್ ಮೃತಪಟ್ಟ ದಾರುಣ ಘಟನೆ ಮುಂಬೈನಲ್ಲಿ ಸಂಭವಿಸಿದೆ.
ಶುಕ್ರವಾರ ಮಧ್ಯಾಹ್ನ ಜೋಗೇಶ್ವರಿ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಧತ್ರಿಪುತ್ರ ನಂದಿನಿ ಧಾರವಾಹಿ ಮೂಲಕ ಖ್ಯಾತಿ ಪಡೆದಿದ್ದ ಅಮನ್ ಜೈಸ್ವಾಲ್ ಅಸುನೀಗಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಮನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾದ ಗಾಯದ ಕಾರಣ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಲಾರಿ ಚಾಲಕನ ವಿರುದ್ಧ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಗಾಗಿ ದೂರು ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.



