Tuesday, June 30, 2026
Google search engine
Homeಮನರಂಜನೆಉದ್ಯಮಿ ಪ್ರತ್ಯಕ್ಷ್ ಕೈ ಹಿಡಿದ ಕಿರುತೆರೆ ನಟಿ ಚಂದನಾ ಅನಂತಕೃಷ್ಣ!

ಉದ್ಯಮಿ ಪ್ರತ್ಯಕ್ಷ್ ಕೈ ಹಿಡಿದ ಕಿರುತೆರೆ ನಟಿ ಚಂದನಾ ಅನಂತಕೃಷ್ಣ!

ಕಿರುತೆರೆ ನಟಿ ಅನಂತಕೃಷ್ಣ ಗುರುವಾರ ಗುರುಹಿರಿಯರ ಸಮ್ಮುಖದಲ್ಲಿ ಉದ್ಯಮಿ ಪ್ರತ್ಯಕ್ಷ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಲಕ್ಷ್ಮೀ ನಿವಾಸ ಧಾರವಾಹಿಯಲ್ಲಿ ನಟಿಸುತ್ತಿರುವ ಅನಂತಕೃಷ್ಣ ಬೆಂಗಳೂರಿನ ಪ್ಯಾಲೇಸ್ ಮೈದಾನದಲ್ಲಿ ಗುರುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರತ್ಯಕ್ಷ್ ಅವರ ಕೈ ಹಿಡಿದರು.

ಗುರುಹಿರಿಯರು ನಿಶ್ಚಿಯಿಸಿದ ಮದುವೆ ಸಮಾರಂಭದಲ್ಲಿ ಕಿರುತೆರೆ ನಟ-ನಟಿಯರು ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.

ಪ್ರತ್ಯಕ್ಷ್ ಉದ್ಯಮಿ ಆಗಿದ್ದರೂ ಅವರ ಪೋಷಕರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್‌ಕುಮಾರ್ ಜೊತೆ ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದರು. ಆರಂಭ, ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ರಿಯಾಲಿಟಿ ಶೋಗಳಲ್ಲಿ ಕೂಡ ಅನಂತ ಕೃಷ್ಣಕಾಣಿಸಿಕೊಂಡಿದ್ದು, ಪ್ರಸ್ತುತ ‘ಲಕ್ಷ್ಮಿ ನಿವಾಸ’ ಧಾರವಾಹಿಯಲ್ಲಿ ಜಾಹ್ನವಿ ಪಾತ್ರ ನಿಭಾಯಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments