ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ ಆರ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ತೆಲುಗು ದೇಶಂ ಅಧಿಕಾರದತ್ತ ದಾಪುಗಾಲಿರಿಸಿದೆ.
ತೆಲುಗು ದೇಶಂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 175 ವಿಧಾನಸಭಾ ಕ್ಷೇತ್ರದಲ್ಲಿ 127 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಮಿತ್ರಪಕ್ಷಗಳಾದ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ 17 ಮತ್ತು ಬಿಜೆಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪೂರ್ಣ ಬಹುಮತದತ್ತ ದಾಪುಗಾಲಿಸಿದರೆ, ವೈಎಸ್ ಆರ್ ಪಕ್ಷ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಭಾರೀ ಮುನ್ನಡೆಯೊಂದಿಗೆ ತೆಲುಗುದೇಶಂ ಪಕ್ಷದ ಮುಖಂಡ ಚಂದ್ರಬಾಬು ನಾಯ್ಡು ಜೂನ್ 9ರಂದು ಅಮರಾವತಿಯಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಘೋಷಿಸಿದ್ದಾರೆ.