ಬೆಂಗಳೂರು: ಮುಂಬರುವ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆ-1 ಮತ್ತು ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 22ರವರೆಗೆ ಅವಕಾಶ ನೀಡಲಾಗಿದೆ.
ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅನ್ನು 2027ರ ಮಾರ್ಚ್ 22ರಿಂದ ಏಪ್ರಿಲ್ 5ರವರೆಗೆ, ಪರೀಕ್ಷೆ-2 ಅನ್ನು ಮೇ 24ರಿಂದ ಮೇ 31ರವರೆಗೆ ನಡೆಸಲು ನಿರ್ಧರಿಸಲಾಗಿದೆ.
ಅದೇ ರೀತಿ, ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು 2027ರ ಫೆಬ್ರವರಿ 27ರಿಂದ ಮಾರ್ಚ್ 17ರವರೆಗೆ ಹಾಗೂ ಪರೀಕ್ಷೆ-2 ಅನ್ನು ಮೇ 3ರಿಂದ ಮೇ 15ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿ ರೂಪಿಸಲಾಗಿದೆ.
ಪರೀಕ್ಷಾ ಮಂಡಳಿ ಪ್ರಕಟಿಸಿರುವ ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟವರು ಅಕ್ಟೋಬರ್ 22ರೊಳಗೆ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಬಹುದಾಗಿದೆ.
ತಾತ್ಕಾಲಿಕ ವೇಳಾಪಟ್ಟಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1
– ಮಾರ್ಚ್ 22: ಪ್ರಥಮ ಭಾಷೆ
– ಮಾರ್ಚ್ 25: ವಿಜ್ಞಾನ, ರಾಜ್ಯಶಾಸ್ತ್ರ
– ಮಾರ್ಚ್ 27: ದ್ವಿತೀಯ ಭಾಷೆ
– ಮಾರ್ಚ್ 30: ಗಣಿತ, ಸಮಾಜಶಾಸ್ತ್ರ
– ಏಪ್ರಿಲ್ 2: ತೃತೀಯ ಭಾಷೆ
– ಏಪ್ರಿಲ್ 3: ಅರ್ಥಶಾಸ್ತ್ರ
– ಏಪ್ರಿಲ್ 5: ಸಮಾಜ ವಿಜ್ಞಾನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2
– ಮೇ 24: ಪ್ರಥಮ ಭಾಷೆ
– ಮೇ 25: ವಿಜ್ಞಾನ
– ಮೇ 26: ದ್ವಿತೀಯ ಭಾಷೆ
– ಮೇ 27: ಗಣಿತ
– ಮೇ 28: ತೃತೀಯ ಭಾಷೆ
– ಮೇ 29: ಸಮಾಜ ವಿಜ್ಞಾನ



