ಅಜ್ಜಿ ಮನೆಗೆ ಬಂದಿದ್ದ ಬಾಲಕ ಕೃಷಿಗೆ ಬಳಸುವ ಟ್ರ್ಯಾಕ್ಟರ್ ರೊಟಾವೆಲ್ಟರ್ ಗೆ ಸಿಲುಕಿ ಭೀಕರವಾಗಿ ಮೃತಪಟ್ಟ ಆಘಾತಕಾರಿ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸಂಭವಿಸಿದೆ.
ದೇವರಸನಹಳ್ಳಿಯಲ್ಲಿ ಈ ದಾರುಣ ಘಟನೆ ಸಂಭವಿಸಿದ್ದು, 8 ವರ್ಷದ ಭವಿಷ್ ಮೃತಪಟ್ಟ ಬಾಲಕ.
ಚಾಮರಾಜನಗರದಲ್ಲಿ ನಿಗದಿಯಾಗಿದ್ದ ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್ ತನ್ನ ಸೋದರಮಾವನ ಜೊತೆ ಟ್ರ್ಯಾಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದ.
ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಭವಿಷ್ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದಾನೆ ಬಳಿಕ ರೊಟಾವೆಲ್ಟರ್ಗೆ ಸಿಲುಕಿ ಅವಘಡ ಸಂಭವಿಸಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.