ಬೆಂಗಳೂರಿನ ಪ್ರಮುಖ ಬಡಾವಣೆಯಾಗಿರುವ ನಾಗರಬಾವಿ ಸಮೀಪದ ಚಂದ್ರಲೇಔಟ್ ನಲ್ಲಿ ಶನಿವಾರ ಬೆಳಿಗ್ಗೆ ಬಿಡಿಎ ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 500 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಬೆಳಿಗ್ಗೆ ಹಲವು ವರ್ಷಗಳಿಂದ ಅಕ್ರಮವಾಗಿ ವಶಪಡಿಸಿಕೊಂಡ ಜಾಗದಲ್ಲಿ ನಡೆಸುತ್ತಿದ್ದ 40ಕ್ಕೂ ಹೆಚ್ಚು ಅಂಗಡಿಗಳನ್ನು ನೆಲಸಮ ಮಾಡಿದರು. ಈ ಮೂಲಕ ಕೆಲವು ವರ್ಷಗಳಿಂದ ಅಂಗಡಿ ನಡೆಸಿಕೊಂಡು ಜೀವನ ನಡೆಸುತ್ತಿದ್ದ ಮಾಲೀಕರಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.
ಬಿಡಿಎ ಇತಿಹಾಸದಲ್ಲೇ ಅತಿದೊಡ್ಡ ನೆಲಸಮ ಕಾರ್ಯಾಚರಣೆ ಇದಾಗಿದೆ ಎಂದು ಹೇಳಲಾಗಿದ್ದು, 9 ಎಕರೆ 13 ಗುಂಟೆ ಜಾಗ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 500 ಕೋಟಿ ರೂ. ಮೌಲ್ಯದ್ದಾಗಿದೆ.
ಬಿಡಿಎ ಎಇ ರವಿಕುಮಾರ್, ಬಿಡಿಎ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಿಡಿಎ ಅಧಿಕಾರಿಗಳು ಸರ್ವೇ ನಂಬರ್ 78ರಲ್ಲಿದ್ದ 9 ಎಕರೆ ಜಾಗದ 500 ಕೋಟಿ ರೂ. ಮೌಲ್ಯದ ಜಾಗವನ್ನ ತೆಕ್ಕೆಗೆ ಪಡೆದುಕೊಂಡಿದೆ.