Thursday, November 21, 2024
Google search engine
Homeತಾಜಾ ಸುದ್ದಿಕೊಟ್ಟ ಮಾತಿನಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ!

ಕೊಟ್ಟ ಮಾತಿನಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆ ಉಂಟಾದರೆ ರಾಜೀನಾಮೆ ನೀಡುವುದಾಗಿ ಶಪಥ ಮಾಡಿದ್ದ ಬಿಜೆಪಿ ನಾಯಕ ಕಿರ್ದೊಯಿ ಲಾಲ್ ಮೀನಾ ರಾಜಸ್ಥಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

72 ವರ್ಷದ ಕಿರ್ದೊಯಿ ಲಾಲ್ ಮೀನಾ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ತವರೂರು ಡೌಸಾ ಸೇರಿದಂತೆ ನಿರೀಕ್ಷಿತ ಸ್ಥಾನ ಬಾರದೇ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಕಿರ್ದೊಯಿ ಲಾಲ್ ಮೀನಾ ಕೊಟ್ಟ ಮಾತಿನಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ 10 ದಿನಗಳ ಹಿಂದೆಯೇ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ತಲುಪಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜಸ್ಥಾನದಲ್ಲಿ 25 ಸ್ಥಾನಗಳ ಪೈಕಿ 14ರಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ಡೌಸಾ ಸೇರಿದಂತೆ 8 ಕ್ಷೇತ್ರಗಳಲ್ಲಿ ಗೆದ್ದು ಸುಧಾರಣೆ ಕಂಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments