ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಆಮ್ ಆದ್ಮಿ ಪಕ್ಷವನ್ನು ಆರೋಪಿಯಾಗಿ ಉಲ್ಲೇಖಿಸಿದೆ. ದೇಶದ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದರ ಮೇಲೆ ಆರೋಪ ಹೊರಿಸಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ದೇಶದಲ್ಲಿ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದನ್ನು ಆರೋಪಿ ಎಂದು ಪರಿಗಣಿಸಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇದು ದೇಶದ ರಾಜಕೀಯ ವ್ಯವಸ್ಥೆಯಲ್ಲೇ ಮೊದಲ ಬಾರಿಯಾಗಿದ್ದು, ಹೊಸ ರಾಜಕೀಯ ಅಧ್ಯಾಯ ಕಾಲಿಟ್ಟಂತಾಗಿದೆ.
ರಾಷ್ಟ್ರೀಯ ಪಕ್ಷವಾಗಿರುವ ಆಮ್ ಆದ್ಮಿ, ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಸಂಘಟಕ ಅರವಿಂದ್ ಕೇಜ್ರಿವಾಲ್ ಪ್ರಮುಖ ಆರೋಪಿಗಳು ಎಂದು ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ನಡೆದಿದೆ ಎನ್ನಲಾದ ಮದ್ಯ ನೀತಿ ಹಗರಣದಲ್ಲಿ ಈಗಾಗಲೇ ದೆಹಲಿಯ ಆಮ್ ಆದ್ಮಿ ಪಕ್ಷದ ಹಲವು ಸಚಿವರು ವಿಚಾರಣೆಗೆ ಒಳಪಟ್ಟಿದ್ದು, ಜೈಲು ವಾಸಿಯಾಗಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದರೂ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿ ಬಿಡುಗಡೆ ಮಾಡಿದೆ.