Friday, 30 October 2026 — Kannadavahini
BREAKING NEWS
ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ರಾಜ್ಯ

ನಾಳೆ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ: ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ ಸಾರ್ವಜನಿಕ ದರ್ಶನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
salumarada timmakka

ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ನಿಧನ

ಅತ್ಯಂತ ಕಡುಬಡತನದಲ್ಲೂ ಪರಿಸರ ಸಂರಕ್ಷಣೆ ಮಾಡಿ ಮನೆಮಾತಾಗಿದ್ದ ಪದ್ಮಶ್ರೀ ಪುರಸ್ಕೃತೆ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ 1911 ಜೂನ್ 30ರಂದು ಜನಿಸಿದ್ದ ತಿಮ್ಮಕ್ಕ ಅದೇ ಗ್ರಾಮದ ಚಿಕ್ಕಯ್ಯ ಅವರನ್ನು ವಿವಾಹವಾಗಿದ್ದರು.

ತಿಮ್ಮಕ್ಕ ಯಾವುದೇ ನೆರವಿಲ್ಲದೇ ತನ್ನ ಸಂಪಾದನೆಯಿಂದಲೇ ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದರು. ಇವರ ಪರಿಸರ ಕಾಳಜಿ ಗಮನಿಸಿ ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು.

2020ರಲ್ಲಿ ಕರ್ನಾಟಕ ಕೇಂದ್ರೀಯ ವಿವಿಯಿಂದ ಗೌರವ ಡಾಕ್ಟರೇಟ್, 2020ರಲ್ಲಿ ಹಂಪಿ ವಿವಿಯ ನಾಡೋಜಾ ಪ್ರಶಸ್ತಿ ಅಲ್ಲದೇ ಪರಿಸರ ನಾಗರಿಕ ಪ್ರಶಸ್ತಿ, ಪರಿಸರ ರತ್ನ ಪ್ರಶಸ್ತಿ,ವೃಕ್ಷ ಮಾತಾ,  ಗ್ರೀನ್ ಚಾಂಪಿಯನ್ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8395 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment