Sunday, June 7, 2026
Google search engine
Homeರಾಜ್ಯಉತ್ತರ ಕರ್ನಾಟಕದಲ್ಲಿ ಸುಡುಬಿಸಿಲು: ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡಿದ ಸರ್ಕಾರ

ಉತ್ತರ ಕರ್ನಾಟಕದಲ್ಲಿ ಸುಡುಬಿಸಿಲು: ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡಿದ ಸರ್ಕಾರ

ಬೆಂಗಳೂರು: ಬಿಸಿಲಿನ ಉರಿ ಹಿನ್ನೆಲೆ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ 2026ರ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡಿ ಆದೇಶಿಸಲಾಗಿದೆ.

ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಗ್ಗೆ 8 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು.

ಬೆಳಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ : ಪ್ರಸ್ತಾಪಿಸಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದನ್ನು ಪರಿಗಣಿಸಿ, ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸಮಯ ಬದಲಾವಣೆ ಬಗ್ಗೆ ಆದೇಶ ಹೊರಡಿಸಲಾಗಿದೆ. ಅದರಂತೆ 2026ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಬೆಳಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾವಣೆ ಮಾಡಲಾಗಿದೆ.

ಈ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ಆದೇಶ ಅನ್ವಯ: ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು / ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಬೇಸಿಗೆಯಲ್ಲಿ ತಾಪಮಾನ ಹೆಚ್ಚುತ್ತಿದೆ. ಬಿಸಿಲಿನ ಅಲೆಗಳು ಹೆಚ್ಚಾಗಿ ಕಂಡುಬರುತ್ತಿವೆ. ವಿಶೇಷವಾಗಿ ಹೈದರಾಬಾದ್ ಕರ್ನಾಟಕದಲ್ಲಿ ಋತುವಿನ ಆರಂಭದಲ್ಲಿ ತಾಪಮಾನ ಏರುತ್ತಿರುವುದಲ್ಲದೇ, ಅಧಿಕ ಸಮಯದವರೆಗೂ ಉಷ್ಣಾಂಶ ಹೆಚ್ಚಿರಲಿದೆ.

ಇದೀಗ ಪರೀಕ್ಷೆಗಳು ಇರುವುದರಿಂದ ಮಕ್ಕಳು ನಿರಂತರವಾಗಿ ನೀರು ಕುಡಿಯುವುದು, ಬಿಸಿಲಿಗೆ ತಲೆಯೊಡ್ಡದೇ ಇರುವಂತೆ ನೋಡಿಕೊಳ್ಳಬೇಕು. ಕಾರ್ಮಿಕರು ಮುಂಜಾಗ್ರತೆ ವಹಿಸಬೇಕು. ಹೀಟ್ ವೇವ್ ಕಂಡೀಷನ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಮಟ್ಟದಲ್ಲಿ ಇರಬಹುದೆಂದು ಅಂದಾಜಿಸಲಾಗಿದೆ. ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ತಜ್ಞರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments