Friday, May 15, 2026
Google search engine
Homeಮನರಂಜನೆನಟಿ ಸಂಜನಾ ಗಲ್ರಾನಿಗೆ ವಂಚಿಸಿದವನಿಗೆ 61 ಲಕ್ಷ ರೂ. ದಂಡ, 6 ತಿಂಗಳು ಜೈಲು!

ನಟಿ ಸಂಜನಾ ಗಲ್ರಾನಿಗೆ ವಂಚಿಸಿದವನಿಗೆ 61 ಲಕ್ಷ ರೂ. ದಂಡ, 6 ತಿಂಗಳು ಜೈಲು!

ಬೆಂಗಳೂರು: ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಕ್ಯಾಸಿನೊ ವ್ಯವಸ್ಥಾಪಕನಿಗೆ ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ದಂಡ ಮತ್ತು ಶಿಕ್ಷೆ ವಿಧಿಸಿದ್ದಾರೆ.

ದಂಡದ ಮೊತ್ತದಲ್ಲಿ 10 ಸಾವಿರ ರೂ. ಕೋರ್ಟ್ ಶುಲ್ಕವನ್ನು ಕಡಿತಗೊಳಿಸಿ ಉಳಿದ 61.40 ಲಕ್ಷ ರೂ.ವನ್ನು ದೂರುದಾರೆ ಸಂಜನಾಗೆ ನೀಡಬೇಕು. ನಿಗದಿತ ಸಮಯದ ಒಳಗಡೆ ದಂಡದ ಮೊತ್ತವನ್ನು ಪಾವತಿ ಮಾಡಿದರೆ 6 ತಿಂಗಳ ಶಿಕ್ಷೆಯನ್ನು ಮಾಫಿ ಮಾಡಲಾಗುತ್ತದೆ. ಇಲ್ಲವಾದರೆ 6 ತಿಂಗಳು ಜೈಲು ಮತ್ತು ದಂಡವನ್ನು ಪಾವತಿ ಮಾಡಬೇಕೆಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ರಾಹುಲ್ ತೋನ್ಸೆ ಗೋವಾ ಮತ್ತು ಕೊಲಂಬೋದಲ್ಲಿ ಕ್ಯಾಸಿನೋಗಳ (Colombo Casino) ವ್ಯವಸ್ಥಾಪಕ ನಿರ್ದೇಶಕನಾಗಿದ್ದಾನೆ. ಈತ ಸಂಜನಾಗೆ ನಾನು ಹೇಳಿದ ಕಡೆಗಳಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಸಿಗಲಿದೆ ಎಂದು ಹೇಳಿದ್ದ.

ರಾಹುಲ್ ತೋನ್ಸೆ ಗೋವಾ ಮತ್ತು ಕೊಲಂಬೋದಲ್ಲಿ ಕ್ಯಾಸಿನೋಗಳ (Colombo Casino) ವ್ಯವಸ್ಥಾಪಕ ನಿರ್ದೇಶಕನಾಗಿದ್ದಾನೆ. ಈತ ಸಂಜನಾಗೆ ನಾನು ಹೇಳಿದ ಕಡೆಗಳಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಸಿಗಲಿದೆ ಎಂದು ಹೇಳಿದ್ದ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments