ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಎದುರು ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧಿಸಲಾದ ಆರೋಪಿಗಳ ಪೈಕಿ ಒಬ್ಬ ಜೈಲಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
32 ವರ್ಷದ ಅರ್ಜುನ್ ತಪಮಾನ್ ಎಂಬಾತ ಪೊಲೀಸ್ ಕಸ್ಟಡಿಯಲ್ಲಿ ಇರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಏಪ್ರಿಲ್ 26ರಂದು ಪಂಜಾಬ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಅರ್ಜುನ್ ತಪಮಾನ್, ಬುಧವಾರ ಬೆಳಿಗ್ಗೆ 11 ಗಂಟೆಗೆ ಟಾಯ್ಲೆಟ್ ಗೆ ಹೋಗುವ ನೆಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಆರೋಪಿ ಜೊತೆ ಇನ್ನೂ 10 ಮಂದಿ ಒಂದೇ ಸೆಲ್ ನಲ್ಲಿ ಕೂಡಿ ಹಾಕಲಾಗಿದ್ದು, 5 ಪೊಲೀಸ್ ಸಿಬ್ಬಂದಿ ಭದ್ರತೆ ಇರಿಸಲಾಗಿದೆ. ಪೊಲೀಸರು ಆತ್ಮಹತ್ಯೆ ಕುರಿತು ತನಿಖೆ ಆರಂಭಿಸಿದ್ದಾರೆ.