Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ರಾಜಕೀಯ

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಯಿತು: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 15 ವೀಕ್ಷಣೆಗಳು

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಅತ್ಯಂತ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಮುರಿಯಲು ಸಾಧ್ಯವಾಗಿದ್ದು, ಜನರ ಆಶೀರ್ವಾದ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜನರ ಆಶೀರ್ವಾದದಿಂದ ಕರ್ನಾಟಕದಲ್ಲಿ ಅತೀ ಹೆಚ್ಚು ಅವಧಿಯ ಸಿಎಂ ಎಂಬ ದಾಖಲೆ ಮುರಿಯಲು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ ಎಂದರು.

ತಾಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ.  13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದು ಅವರು ಹೇಳಿದರು.

ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಚುನಾವಣೆಯಲ್ಲಿ ಸರ್ವಾನುಮತದಿಂದಲೂ ಆಯ್ಕೆಯಾಗಿದ್ದರು ಎಂದು ಅವರು ವಿವರಿಸಿದರು.

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಆದರೆ ನನ್ನ ಅಥವಾ ಸರ್ಕಾರದ ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು.ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲಾಗುವುದು. ಅವರು ಸಮಯ ನೀಡಿದರೆ ಚರ್ಚಿಸಲಿರುವುದಾಗಿ ತಿಳಿಸಿದರು.

ಬಳ್ಳಾರಿ ನಡೆದ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆಯ ತನಿಖೆಯನ್ನು ಸಿಐಡಿ ಗೆ ವಹಿಸಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಪೊಲೀಸ್ ತನಿಖೆಯ ನಂತರ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯ

ಜಿಎಸ್ ಟಿ ಕಡಿತ, ವಿಬಿ ಜಿ ರಾಮ್ ಜಿ ಯೋಜನೆ ಜಾರಿಯಂತಹ ಕೇಂದ್ರದ ಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ರಾಜ್ಯಕ್ಕೆ ಜಿಎಸ್ ಟಿ ಯಿಂದ  ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಅವರು ಆರೋಪಿಸಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮ ನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸನ್ಣರೈತರು,ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳನ್ನು ಕಡಿಮೆಯಾಗಲಿದ್ದು, ಜನರ ಮೂಲಭೂತ ಹಕ್ಕಿಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯ ಸರ್ಕಾರದ ಮೇಲೆ ಸುಮಾರು 3000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದರು.

ಹುಲಿ ಸೆರೆಗೆ ಅರಣ್ಯ ಇಲಾಖೆಗೆ ಸೂಚನೆ

ಮೈಸೂರಿನ  ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗಧಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನರ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ.  ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು  ಸೂಚಿಸಲಾಗಿದೆ ಎಂದರು.

ಮೈಸೂರಿನ ಅರಮನೆಯ ಮುಂಭಾಗದಲ್ಲಿ ಬಲೂನ್ ಸ್ಪೋಟದಲ್ಲಿ ಮೃತರಾದ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment