ಮಂಡ್ಯ ಜಿಲ್ಲೆಯ ವಿಶ್ವವಿಖ್ಯಾತ ಕೆಆರ್ ಎಸ್ ಬೃಂದಾವನ್ನು ಫ್ಯಾಂಟಸಿ ಪಾರ್ಕ್ ಆಗಿ ಅಭಿವೃದ್ಧಿಪಡಿಸಲು 2633 ಕೋಟಿ ರೂ. ಮಂಜೂರು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗೆ ಅನಮೋದನೆ ನೀಡಲಾಯಿತು.
ಡಿಸಿಎಂ ಡಿಕೆ ಶಿವಕುಮಾರ್ ಬೃಂದಾವನವನ್ನು ಫ್ಯಾಂಟಸಿ ಪಾರ್ಕ್ ಆಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದು, ಫ್ಯಾಂಟಸಿ ಪಾರ್ಕ್ ನಿರ್ಮಾಣದ ನೀಲನಕ್ಷೆಗೆ ಅನುಮೋದಿಸಿದ್ದು, ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ.
ಇದೇ ವೇಳೆ ಸಂಪುಟ ಸಭೆಯಲ್ಲಿ ಕೆಐಎಡಿಬಿಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್ ಗೆ ರಿಯಾಯಿತಿ ಮೊತ್ತಕ್ಕೆ ಹಂಚಿಕೆ ಮಾಡಲು ಅನಮೋದನೆ ನೀಡಲಾಯಿತು. ಜೊತೆಗೆ ಕರ್ನಾಟಕ ವೃತ್ತಿ ಕೌಶಲ್ಯಾಭಿವೃದ್ದಿ ನಿಗಮ ಸ್ಥಾಪನೆಗೂ ಸಂಪುಟ ಒಪ್ಪಿಗೆ ಸೂಚಿಸಿದೆ.