Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ತಾಜಾ ಸುದ್ದಿ

ಬಾಡಿಗೆದಾರರಿಗೆ ಸಿಹಿಸುದ್ದಿ: ಗೃಹಜ್ಯೋತಿಗೆ ಡಿ-ಲಿಂಕ್ ಸೌಲಭ್ಯ ಘೋಷಣೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
gruha jyothi
ಗೃಹಜ್ಯೋತಿಗೆ ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ ಘೋಷಿಸಿದ ರಾಜ್ಯ ಸರ್ಕಾರ!

ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ.

ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದ್ದು, ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್‌ ಮಾಡುವುದು ಹೇಗೆ?

ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌ .ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಿ.

ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

ಗೃಹ ಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು, ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಹೇಳಿದ್ದಾರೆ.

2024ರ ಜೂನ್‌ವರೆಗೆ ಗೃಹಜ್ಯೋತಿ ಯೋಜನೆಗೆ 1.67 ಕೋಟಿ ನೋಂದಣಿ ಮಾಡಿಕೊಳ್ಳಲಾಗಿದ್ದು, 1.56 ಕೋಟಿ ಒಟ್ಟು ಫಲಾನುಭವಿಗಳು ಇದ್ದಾರೆ. 2023 ಆಗಸ್ಟ್ ರಿಂದ 2024 ಜೂನ್‌ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟು ಸಬ್ಸಿಡಿ-8239 ಕೋಟಿ ರೂ. ವಿತರಣೆ ಮಾಡಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment