Friday, November 22, 2024
Google search engine
Homeತಾಜಾ ಸುದ್ದಿಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪ್ರೊತ್ಸಾಹಧನ 2 ಲಕ್ಷ ರೂ.ಗೆ ಏರಿಸಿದ ರಾಜ್ಯ ಸರ್ಕಾರ!

ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪ್ರೊತ್ಸಾಹಧನ 2 ಲಕ್ಷ ರೂ.ಗೆ ಏರಿಸಿದ ರಾಜ್ಯ ಸರ್ಕಾರ!

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಐಐಟಿ ಸೇರಿ ಇತರೆ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು 1 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು ರೂ.1.00 ಲಕ್ಷಗಳಿಂದ ರೂ. 2.00 ಲಕ್ಷಗಳಿಗೆ ಹೆಚ್ಚಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಪಿಯುಸಿಯಲ್ಲಿ ಶೇ. 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯದೆ, ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೊದಲನೇ ವರ್ಷದಲ್ಲಿ ರೂ. 25.00 ಲಕ್ಷಗಳನ್ನು ಕಾಲೇಜು ಶುಲ್ಕವಾಗಿ ಪಾವತಿಸಲಿದೆ.

ಸದರಿ ವಿದ್ಯಾರ್ಥಿಯು MBBS ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ, ಪುನಃ ರೂ.25.00 ಲಕ್ಷಗಳ ಪ್ರೋತ್ಸಾಹಧನವನ್ನು ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಆದೇಶಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments