ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮ ಅವರನ್ನು ಕರ್ನಾಟಕದಲ್ಲಿ ನಡೆದ ಎಐಸಿಸಿ ಸಭೆಯ ಶತಮಾನೋತ್ಸವ ಸಮಾರಂಭಕ್ಕೆ ಆಹ್ವಾನಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ.
ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಶತಮಾನೋತ್ಸವ ಸಮಾರಂಭಕ್ಕೆ ಬರಾಕ್ ಓಬಾಮಾ ಅವರನ್ನು ರಾಜ್ಯ ಸರಕಾರ ಆಹ್ವಾನಿಸಲು ನಿರ್ಧರಿಸಿದೆ.
ಸಚಿವ ಎಂಬಿ ಪಾಟೀಲ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಬರಾಕ್ ಓಬಾಮಾ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
1924, ಡಿಸೆಂಬರ್ 26 ಮತ್ತು 27ರಂದು ಮಹಾತ್ಮ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶ ಬೆಳಗಾವಿಯಲ್ಲಿ ನಡೆದಿತ್ತು. ಇದೇ ಸಂದರ್ಭದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಎರಡೂ ಕಾರ್ಯಕ್ರಮಗಳನ್ನು ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಬರಾಕ್ ಓಬಾಮಾ ಅವರಿಗೆ ಪತ್ರ ಬರೆದಿದ್ದಾರೆ ಎಂದು ಪಾಟೀಲ್ ತಿಳಿಸಿದರು.
ಕಾಂಗ್ರೆಸ್ ಸಮಾವೇಶದಲ್ಲಿ ಸಮಾವೇಶದ ಫೋಟೊಗಳ ಛಾಯಾಚಿತ್ರ ಪ್ರದರ್ಶನ, ಗಾಂಧೀಜಿ ಆರಂಭಿಸಿದ ಸ್ವಚ್ಚತಾ ಅಭಿಯಾನ ಮುಂತಾದಗಳು ಪ್ರದರ್ಶನ ನಡೆಯಲಿದೆ ಎಂದು ಅವರು ಹೇಳಿದರು.