Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ತಾಜಾ ಸುದ್ದಿ

ಮೈಸೂರು-ಮಂಗಳೂರು ಸೇರಿ ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ ಭಾರತ ಮೀಸಲು ಬ್ಯಾಟಲಿಯನ್ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200  ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.

ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera  ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment