ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳನ್ನು ಸಾಮಾನ್ಯವಾಗಿ ಸಿಐಡಿಗೆ ವಹಿಸಲಾಗುವುದು. ಅದರಂತೆ ಈ ಪ್ರಕರಣವನ್ನು ಸಿಐಡಿ ಪೊಲೀಸರಿಗೆ ವಹಿಸಲಾಗಿದೆ ಎಂದರು.
ಸೂರಜ್ ರೇವಣ್ಣ ವಿರುದ್ಧ ಯಾವುದೇ ದೂರು ಇದುವರೆಗೂ ಬಂದಿಲ್ಲ. ಆದರೆ ಇದೀಗ ಅವರ ವಿರುದ್ಧ ದೂರು ಬಂದಿದೆ. ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಯ ವಿರುದ್ಧ ದೂರು ಬಂದಿರುವುದರಿಂದ ಸಿಐಡಿಗೆ ವಹಿಸಲಾಗಿದೆ ಎಂದು ಅವರು ಹೇಳಿದರು.
ಸಿಐಡಿ ಪೊಲೀಸರು ಕಾನೂನು ಪ್ರಕಾರ ಯಾವ ಕ್ರಮ ಕೈಗೊಳ್ಳುತ್ತಾರೋ ಅವರಿಗೆ ಬಿಟ್ಟಿದ್ದು, ಇದರಲ್ಲಿ ಯಾವುದೇ ಪ್ರಭಾವ ನಡೆಯುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.