ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವುಗಳಿಸಿ ಆದೇಶ ನೀಡಿದೆ.
ನ್ಯಾ.ಎಂ.ಎಂ. ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಸೋಮವಾರ ಹೊರಡಿಸಿದ ಆದೇಶದಲ್ಲಿ ಜನಾರ್ದನ ರೆಡ್ಡಿ ತವರು ಜಿಲ್ಲೆಗೆ ಪ್ರವೇಶಿಸದಂತೆ ಇದ್ದ ಹಲವು ವರ್ಷಗಳ ನಿರ್ಬಂಧವನ್ನು ತೆರವುಗೊಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಜನಾರ್ದನ ರೆಡ್ಡಿಗೆ ಬಳ್ಳಾರಿ, ಕಡಪ ಹಾಗೂ ಅನಂತಪುರ ಜಿಲ್ಲೆಗಳಿಗೆ ಪ್ರವೇಶಿಸುವಾಗ ಪೂರ್ವಾನುಮತಿ ಪಡೆಯುವ ಅವಶ್ಯಕತೆ ಇಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಇದಕ್ಕೂ ಮೊದಲು ಬಳ್ಳಾರಿ ಪ್ರವೇಶಿಸಬೇಕಾದರೆ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆದ ನಂತರ ಜನಾರ್ದನ ರೆಡ್ಡಿ ಪ್ರವೇಶಿಸಬೇಕಾಗಿತ್ತು. ಈ ಸಮಸ್ಯೆಯಿಂದಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಿಂದ ಗೆದ್ದು ಶಾಸಕರಾಗಿದ್ದರು.