Friday, May 15, 2026
Google search engine
Homeಕಾನೂನುನಟ ದರ್ಶನ್‌ ಗೆ ಒಂದು ವರ್ಷ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ನಟ ದರ್ಶನ್‌ ಗೆ ಒಂದು ವರ್ಷ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸಲ್ಲಿಸಿದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಈ ಮೂಲಕ ಮುಂದಿನ ಒಂದು ವರ್ಷ ಜೈಲಿನಲ್ಲೇ ಕಳೆಯಬೇಕಾಗಿದೆ.

ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್‌ ತಮಗೆ ಜೈಲಿನಲ್ಲಿ ಸೂಕ್ತ ಸೌಲಭ್ಯ ನೀಡುತ್ತಿಲ್ಲ. ಆದ್ದರಿಂದ ಜಾಮೀನು ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ಜೈಲಿನಲ್ಲಿ ಕನಿಷ್ಠ ಸೌಲಭ್ಯ ನೀಡಲಾಗಿದೆ. ಅಲ್ಲದೇ ಪ್ರಕರಣದಲ್ಲಿ 60 ಪ್ರಮುಖ ಸಾಕ್ಷಿಗಳ ವಿಚಾರಣೆ ಒಂದು ವರ್ಷದಲ್ಲಿ ಪೂರೈಸಬೇಕು. ಅಲ್ಲಿಯವರೆಗೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ.

57ನೇ ಸಿಎಸ್‌ ಎಚ್‌ ನ್ಯಾಯಾಲಯ ನೀಡಿದ ತೀರ್ಪು ಹಾಗೂ ಸರ್ಕಾರದ ಕ್ರಮ ಸೇರಿದಂತೆ ಹಲವು ವರದಿಗಳನ್ನು ಪರಿಶೀಲಿಸಿದ ನಂತರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪರ್ದಿವಾಲಾ, ಸಾಕ್ಷಿಗಳ ವಿಚಾರಣೆ ಕುರಿತು ಸ್ಪಷ್ಟನೆ ಕೇಳಿತು. ಪ್ರಕರಣದಲ್ಲಿ 157 ಸಾಕ್ಷಿಗಳ ವಿಚಾರಣೆ ಬಾಕಿ ಇದ್ದು, ಇದರಲ್ಲಿ 60 ಪ್ರಮುಖ ಸಾಕ್ಷಿಗಳ ವಿಚಾರಣೆ ಬಾಕಿ ಇದೆ ಎಂದು ಹೇಳಿದರು.

ವಾದ ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶರು, ಒಂದು ವರ್ಷದಲ್ಲಿ 60 ಸಾಕ್ಷಿಗಳ ವಿಚಾರಣೆ ಮುಗಿಸಬೇಕು. ಅಲ್ಲಿಯವರೆಗೂ ದರ್ಶನ್‌ ಗೆ ಜಾಮೀನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ವಿಚಾರಣೆಯಲ್ಲಿ ದೋಷ ಕಂಡು ಬಂದರೆ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ಸುಪ್ರೀಂಕೋರ್ಟ್‌ ಆದೇಶದಿಂದ ದರ್ಶನ್‌ ಗೆ 2027 ಮೇ 15ರವರೆಗೆ ಜೈಲಿನಲ್ಲಿಯೇ ಕಳೆಯಬೇಕಾದ ಸಂಕಷ್ಟಕ್ಕೆ ಸಿಲುಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments