ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್ ವಿರುದ್ಧ ಪೊಲೀಸರು ನಡೆಸುತ್ತಿರುವ ತನಿಖೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ತನ್ನ ಇಬ್ಬರು ಮಕ್ಕಳನ್ನು ಮೋಡಿ ಮಾಡಿ ಕುಟುಂಬದ ಸಂಪರ್ಕ ಕಡಿತಗೊಳಿಸಿ ಆಶ್ರಮದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಪ್ರೊಫೆಸರ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತನಿಖೆಯ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಕೊಯಮತ್ತೂರಿನ ಇಶಾ ಫೌಂಡೇಶನ್ ಗೆ 150ಕ್ಕೂ ಹೆಚ್ಚು ಪೊಲೀಸರು ನುಗ್ಗಿ ಪರಿಶೀಲನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಜಗ್ಗಿ ವಾಸುದೇವ್ ತನಿಖೆಗೆ ತಡೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠ ತನಿಖೆಗೆ ತಡೆ ನೀಡಿದೆ.