Thursday, November 21, 2024
Google search engine
Homeಜಿಲ್ಲಾ ಸುದ್ದಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ

ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗೋಕಾಕ ಜಿಲ್ಲೆಯ ಕೌಜಲಗಿಯಲ್ಲಿ ಸೋಮವಾರ ನಡೆದ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ. ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು.

ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಹಿಸಿದ್ದರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments