Friday, August 14, 2026
Google search engine
Homeದೇಶಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಬೆನ್ನಲ್ಲೇ ರಾಜಧಾನಿಯಲ್ಲಿ ಹಲವೆಡೆ ಬಾಂಬ್‌ ಬೆದರಿಕೆ

ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಬೆನ್ನಲ್ಲೇ ರಾಜಧಾನಿಯಲ್ಲಿ ಹಲವೆಡೆ ಬಾಂಬ್‌ ಬೆದರಿಕೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಸಾಲು ಸಾಲು ಬಾಂಬ್ ಬೆದರಿಕೆ ಕರೆಗಳಿಂದ ರಾಷ್ಟ್ರ ರಾಜಧಾನಿ ದೆಹಲಿ ಆತಂಕಕ್ಕೊಳಗಾಗಿದೆ. ದೆಹಲಿ ಕೆಂಪುಕೋಟೆ ಹಾಗೂ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ.

ಪ್ರಾಥಮಿಕ ತಪಾಸಣೆಯಲ್ಲಿ ಯಾವುದೇ ಸ್ಥಳದಲ್ಲೂ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. ಇಮೇಲ್‌ನಲ್ಲಿ ದೆಹಲಿ ಹೈಕೋರ್ಟ್, ಜಿಲ್ಲಾ ನ್ಯಾಯಾಲಯಗಳು, ಕೆಂಪುಕೋಟೆ ಹಾಗೂ ದೆಹಲಿಯ ರೈಲುಗಳನ್ನು ಗುರಿಯಾಗಿಸುವುದಾಗಿ ಬೆದರಿಕೆ ಹಾಕಲಾಗಿದೆ. ಅಲ್ಲದೆ, ದೆಹಲಿಯನ್ನು ‘ಖಾಲಿಸ್ತಾನ್’ನ ಭಾಗವಾಗಿ ಮಾಡುವುದಾಗಿಯೂ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಮಧ್ಯಾಹ್ನ 2:11ಕ್ಕೆ ದೆಹಲಿ ಹೈಕೋರ್ಟ್‌ನಲ್ಲಿ ಬಾಂಬ್ ಸ್ಫೋಟ” ಎಂದು ಇ-ಮೇಲ್​ನಲ್ಲಿ ಬರೆಯಲಾಗಿದ್ದು, 1984ರ ಸಿಖ್ ವಿರೋಧಿ ದಂಗೆ ಸೇರಿದಂತೆ ಸಿಖ್ಖರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ದೆಹಲಿ ಹೈಕೋರ್ಟ್ ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ ಎಂದು ಕೂಡ ಆರೋಪಿಸಲಾಗಿದೆ. ಇದನ್ನೇ ದಾಳಿಯ ಬೆದರಿಕೆಗೆ ಕಾರಣವೆಂದು ಬಿಂಬಿಸಲು ಯತ್ನಿಸಲಾಗಿದೆ.

ಇಮೇಲ್‌ನಲ್ಲಿ ಉಲ್ಲೇಖಿಸಲಾದ ಸ್ಥಳಗಳ ಜೊತೆಗೆ, ಜಾಮ್ ನಗರ ಹೌಸ್, ಜಂಡೇವಾಲನ್‌ನಲ್ಲಿರುವ ಕಟ್ಟಡ, ಎಂ.ಬಿ ಸಾಕೆಟ್‌ನಲ್ಲಿರುವ ಡಿಎಂ ಕಚೇರಿ, ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ಮತ್ತು ದೆಹಲಿ ಕಾಂಟೋನ್ಮೆಂಟ್‌ನಲ್ಲಿರುವ ಎಸ್‌ಡಿಎಂ ಕಚೇರಿ ಸೇರಿದಂತೆ ಇತರೆ ಹಲವು ಸಂಸ್ಥೆಗಳಿಗೂ ಬಾಂಬ್ ಬೆದರಿಕೆ ಕರೆಗಳು ಬಂದಿವೆ.

ಬೆದರಿಕೆ ಬೆನ್ನಲ್ಲೇ ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿಯನ್ನು ಎಲ್ಲಾ ಸ್ಥಳಗಳಲ್ಲೂ ನಿಯೋಜಿಸಲಾಗಿದೆ. ಆದರೆ, ತನಿಖೆಯ ವೇಳೆ ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲನ್ನು ತೀವ್ರಗೊಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments