ಅಗ್ನಿವೀರ್ ಹುತಾತ್ಮ ಯೋಧನ ಕುಟುಂಬಕ್ಕೆ ಪೂರ್ಣ ಪ್ರಮಾಣದಲ್ಲಿ ಕೇಂದ್ರ ಸರ್ಕಾರ ಪರಿಹಾರ ಮೊತ್ತ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೆ ಆರೋಪಿಸಿದ್ದಾರೆ.
ಅಗ್ನಿವೀರ್ ಹುತಾತ್ಮ ಯೋಧನ ಕುಟುಂಬಕ್ಕೆ ಲೋಕಸಭೆ ಕಲಾಪದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ 1 ಕೋಟಿ ರೂ. ಪರಿಹಾರ ನೀಡಿದ್ದೇವೆ ಎಂದು ಹೇಳಿಕೆ ನೀಡಿದರೆ, ಭಾರತೀಯ ಸೇನೆ 98 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಹೇಳಿಕೆ ನೀಡಿತ್ತು.
ಪರಿಹಾರ ಮೊತ್ತ 98 ಲಕ್ಷ ರೂ. ಬಂದಿದ್ದು, 1.67 ಕೋಟಿ ರೂ. ಬರಬೇಕಿತ್ತು. 50 ಲಕ್ಷ ರೂ. ವಿಮೆ ಹಾಗೂ 48 ಲಕ್ಷ ರೂ. ಪರಿಹಾರ ಮೊತ್ತ ಬಂದಿದೆ ಎಂದು ಅಗ್ನಿವೀರ್ ಹುತಾತ್ಮ ಯೋಧ ಅಜಯ್ ಕುಮಾರ್ ತಂದೆ ಹೇಳಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ರಾಹುಲ್ ಗಾಂಧಿ, ಹುತಾತ್ಮ ಯೋಧನ ಕುಟುಂಬಕ್ಕೆ ಇನ್ನೂ ಪರಿಹಾರ ಮೊತ್ತ ಸಿಕ್ಕಿಲ್ಲ. ಕೇಂದ್ರ ಸರ್ಕಾರಕ್ಕೆ ಪರಿಹಾರ ಮೊತ್ತ ಯಾವುದು? ಪರಿಹಾರ ಮೊತ್ತ ಯಾವುದು ಎಂದು ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಹುತಾತ್ಮ ಯೋಧನಿಗೆ ವೇತನ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ. ಅಜಯ್ ಕುಮಾರ್ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಪರಿಹಾರ ಬೇರೆ, ವಿಮೆ ಬೇರೆ ಎಂದು ರಾಹುಲ್ ತಿರುಗೇಟು ನೀಡಿದ್ದಾರೆ.
ದೇಶಕ್ಕಾಗಿ ಪ್ರಾಣವನ್ನೇ ಬಲಿದಾನ ಮಾಡಿದ ವ್ಯಕ್ತಿಗಳ ಕುಟುಂಬವನ್ನು ಮೋದಿ ಸರ್ಕಾರ ಗೌರವಿಸಬೇಕು. ಆದರೆ ಈ ರೀತಿ ಪರಿಹಾರ ಕೊಡದೇ ಪರಿಹಾರ ಕೊಟ್ಟಿದ್ದೇವೆ ಎಂದು ಸುಳ್ಳು ಹೇಳಿ ಅವರಿಗೆ ಅಪಮಾನ ಮಾಡಬೇಡಿ ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದಾರೆ.