Friday, November 22, 2024
Google search engine
Homeತಾಜಾ ಸುದ್ದಿಜೂನ್‌ ಅಂತ್ಯದವರೆಗೂ ಕುಡಿಯುವ ನೀರಿನ ಸಮಸ್ಯೆ ಇಲ್ಲ: ಸಿಎಂ ಸಿದ್ದರಾಮಯ್ಯ

ಜೂನ್‌ ಅಂತ್ಯದವರೆಗೂ ಕುಡಿಯುವ ನೀರಿನ ಸಮಸ್ಯೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಕೆಆರ್‌ ಎಸ್‌ ನಲ್ಲಿ 11.02 ಟಿಎಂಸಿ ಹಾಗೂ ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ ಎಂದರು.

ಬೆಂಗಳೂರಿನಲ್ಲಿ14,000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳ ಪೈಕಿ 55 ಹಳ್ಳಿಗಳಿಗೆ ನೀರಿನ ಸಮಸ್ಯೆ ಆಗಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 ಎಂಎಲ್‌ ಡಿ ಹೆಚ್ಚುವರಿ ನೀರು ಸಿಗತ್ತೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗಲಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ 313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು. ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅಬಲಂಬಿತ ಪ್ರದೇಶಗಳಲ್ಲಿ KMF ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ಹೇಳಿದ್ದೇನೆ ಎಂದು ಅವರು ವಿವರಿಸಿದರು.

ಕಂಟ್ರೋಲ್ ರೂಮ್ ಗಳ ಸಂಖ್ಯೆ ಹೆಚ್ವಿಸಿ ದೂರು‌ಬಂದ ತಕ್ಷಣ ಆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಟಾಸ್ಕ್ ಫೋರ್ಸ್ ಹೆಚ್ವಿಸಿ ದೂರುಗಳಿಗೆ ತಕ್ಷಣ ಸ್ಪಂದಿಸಲು ಹೇಳಲಾಗಿದೆ. ಪಾರ್ಕ್ ಗಳಲ್ಲಿ ಕುಡಿಯುವ ನೀರು ಬಳಸದಂತೆ, ಶುದ್ದೀಕರಿಸಿದ ನೀರು ಬಳಸುವಂತೆ ಸೂಚನೆ ನೀಡಲಾಗಿದೆ ಸಿದ್ದರಾಮಯ್ಯ ಹೇಳಿದರು.

ಕೆ.ಸಿ.ವ್ಯಾಲಿ ರೀತಿ ಬೆಂಗಳೂರಿನ‌ ಕೆರೆಗಳನ್ನೂ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ. ಬತ್ತಿ ಹೋಗಿರುವ ಪ್ರಮುಖ 14 ಕೆರೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ. ಇದರಿಂದ ಅಂತರ್ಜಲ ಭರ್ತಿ ಆಗಿ ಬೋರ್ ವೆಲ್ ಗಳಿಗೆ ಮರುಜೀವ ಬರುತ್ತದೆ. ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ. ಬೇಕಾದಷ್ಟು ಹಣವನ್ನು ಸರ್ಕಾರ ಮತ್ತು ಬಿಬಿಎಂಪಿ ಒದಗಿಸುತ್ತಿದೆ ಎಂದು ಅವರು ವಿವರಿಸಿದರು.

ಪ್ರತಿ ದಿನ ಅಧಿಕಾರಿಗಳು ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾಯೋಜನೆ ಸಿದ್ದಪಡಿಸುತ್ತಾರೆ. ಭವಿಷ್ಯದಲ್ಲಿ ಎಂಥಾದ್ದೇ ಸಂದರ್ಭದಲ್ಲೂ ನೀರಿನ ಕೊರತೆ ಆಗದಂತೆ ತಜ್ಞರ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿಗೆ 500 ಎಂಎಲ್‌ ಡಿ ನೀರಿನ ಇದೆ. ಈ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments