Saturday, May 16, 2026
Google search engine
Homeಅಪರಾಧಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಹಕರಿಸಿದ್ದ ಮೂವರು ಅರೆಸ್ಟ್

ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಹಕರಿಸಿದ್ದ ಮೂವರು ಅರೆಸ್ಟ್

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿ ಸುಹಾಸ್​ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಹಕರಿಸಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಳವಾರು ಗ್ರಾಮದ ಅಜರುದ್ದೀನ್ (29), ಬಜ್ಪೆ, ಭಟ್ರಕೆರೆ, ಉಸ್ಮಾನಿಯಾ ಬಳಿಯ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) ಹಾಗೂ ಬಂಟ್ವಾಳದ ಫರಂಗಿಪೇಟೆಯ ನೌಷಾದ್ (39) ಬಂಧಿತ ಆರೋಪಿಗಳು.

ನಗರ ಪೊಲೀಸ್ ಆಯುಕ್ತ​ ಅನುಪಮ್ ಅಗರ್ವಾಲ್ ಗುರುವಾರ ಈ ವಿಷಯ ತಿಳಿಸಿದ್ದು, ಕೊಲೆ ಪ್ರಕರಣದ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇವರ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದರು.

ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದ ತನಿಖೆಯು ಮುಂದುವರೆದಿದ್ದು, ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದರು.

ಆರೋಪಿಗಳ ಪೈಕಿ ಅಜರುದ್ದೀನ್ ಯಾನೆ ಅಜರ್ ಯಾನೆ ಅಜ್ಜು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿವೆ. ಈತ ಆರೋಪಿಗಳಿಗೆ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ, ಕೊಲೆಗೆ ಸಹಕರಿಸಿದ್ದ ಎಂದು ಪೊಲೀಸ್​ ಆಯುಕ್ತರು ತಿಳಿಸಿದ್ದಾರೆ.

ಆರೋಪಿ ಅಬ್ದುಲ್ ಖಾದರ್ ಯಾನೆ ನೌಫಲ್ ಎಂಬಾತ ಕೊಲೆ ಬಳಿಕ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷದ್ ಯಾನೆ ವಾಮಂಜೂರು ನೌಷದ್ ಯಾನೆ ಚೊಟ್ಟೆ ನೌಷದ್ ಎಂಬಾತ ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ, ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಈತನ ಮೇಲೆ ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ ಹಾಗೂ ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments