Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ಸಮುದ್ರಪಾಲಾದ ಬೆಂಗಳೂರಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 6 ವೀಕ್ಷಣೆಗಳು
drown
drown

ಮಂಗಳೂರು: ನಗರದ ಸುರತ್ಕಲ್​ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಬುಧವಾರ ಈಜಲು ಹೋದ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲಾಗಿದ್ದು, ಮತ್ತೊಬ್ಬನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿಯ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30) ಹಾಗೂ ಬೆಂಗಳೂರು ಜೆಪಿ ನಗರದ ಸತ್ಯವೇಲು (30) ಮೃತ ವಿದ್ಯಾರ್ಥಿಗಳು. ಬೀದರ್ ಜಿಲ್ಲೆ ಹಂಗರಗಾ ನಿವಾಸಿ ಪರಮೇಶ್ವರ್‌ (30) ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.

ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಸ್ನೇಹಿತರಾಗಿದ್ದ ನಾಲ್ವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಆಗಮಿಸಿ ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಧ್ಯಾಹ್ನದ ವೇಳೆಗೆ ಕುಳಾಯಿಜೆಟ್ಟಿ ಬಳಿಗೆ ಬಂದ ಇವರು ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭದಲ್ಲಿ ನಾಲ್ವರು ನೀರುಪಾಲಾಗಿದ್ದರು.

ಸಮುದ್ರದ ಸೆಳೆತಕ್ಕೆ ಸಿಲುಕುತ್ತಿರುವುದನ್ನು ಗಮನಿಸಿದ ಸ್ಥಳೀಯ, ಮೀನುಗಾರರು ತಕ್ಷಣ ರಕ್ಷಣೆಗೆ ಮುಂದಾಗಿದ್ದರು. ಆದರೆ ಅಷ್ಟರಲ್ಲಾಗಲೇ ಮೂವರು ನೀರುಪಾಲಾಗಿದ್ದಾರೆ. ಓರ್ವನನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರ ಮೃತದೇಹಗಳು ಜೆಟ್ಟಿಯ ಬಲಭಾಗದ ಮೂಲೆಯಲ್ಲಿ ಪತ್ತೆಯಾಗಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ, ಸುರತ್ಕಲ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮಹಜರು ನಡೆಸಿ ಎಜೆ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ನಾಲ್ವರು ಯುವಕರು ಸಮುದ್ರದಲ್ಲಿ ಈಜುತ್ತಿದ್ದ ವೇಳೆ ನೀರುಪಾಲಾಗಿದ್ದಾರೆ. ಇದರಲ್ಲಿ ಓರ್ವನನ್ನು ರಕ್ಷಿಸಲಾಗಿದೆ. ಉಳಿದ ಮೂವರು ಸಾವನ್ನಪ್ಪಿದ್ದಾರೆ’ ಎಂದು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment