20 ಅಡಿ ಮೇಲೆ ಹಾರಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಭಾರತದ ಮೂವರು ಮಹಿಳೆಯರು ಮೃತಪಟ್ಟ ಘಟನೆ ಅಮೆರಿಕದಲ್ಲಿ ಸಂಭವಿಸಿದೆ.
ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದ ಗ್ರೀನ್ ವೆಲ್ಲಿ ಕಂಟ್ರಿಯಲ್ಲಿ ಈ ದುರಂತ ಸಂಭವಿಸಿದ್ದು, ಗುಜರಾತ್ ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾ ಬೇನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನಿಷಾಬೆನ್ ಪಟೇಲ್ ಮೃತಪಟ್ಟ ದುರ್ದೈವಿಗಳು.
ಮಿತಿ ಮೀರಿದ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯರು ಲೈನ್ ನಿಯಮವನ್ನು ಕೂಡ ಪಾಲಿಸಿಲ್ಲ. ಸೇತುವೆ ಬಳಿ ವೇಗವಾಗಿ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಸುಮಾರು 20 ಅಡಿ ಎತ್ತರಕ್ಕೆ ಜಿಗಿದು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.