Sunday, June 28, 2026
Google search engine
Homeಜಿಲ್ಲಾ ಸುದ್ದಿವೀಡಿಯೋ ಮಾಡಿ ಅಣ್ಣ ಆತ್ಮಹತ್ಯೆ, ಬೆದರಿದ ತಮ್ಮ, ತಮ್ಮನ ಪತ್ನಿ ಸಾವಿಗೆ ಶರಣು!

ವೀಡಿಯೋ ಮಾಡಿ ಅಣ್ಣ ಆತ್ಮಹತ್ಯೆ, ಬೆದರಿದ ತಮ್ಮ, ತಮ್ಮನ ಪತ್ನಿ ಸಾವಿಗೆ ಶರಣು!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ ಮತ್ತೊಂದು ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಮೈಸೂರಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್ ಹಾಗೂ ಆನ್ ಲೈನ್ ಬೆಟ್ಟಿಂಗ್ ನಿಂದ ಸೋದರರಾದ ಜೋಶಿ ಆಂಥೋನಿ, ಜೋಬಿ ಆಂಥೋನಿ ಮತ್ತು ನಾದಿನಿ ಶರ್ಮಿಳಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಜೋಶಿ ಆಂಥೋನಿ ತನ್ನ ತಮ್ಮ ಜೋಬಿ ಆಂಥೋನಿ ಮತ್ತು ನಾದಿನಿ ಶರ್ಮಿಳಾ ಮೇಲೆ ಮೋಸದ ಆರೋಪ ಹೊರಿಸಿ ವೀಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೀಡಿಯೋದಲ್ಲಿ ಜೋಬಿ, ಆತನ ಪತ್ನಿ ಶರ್ಮಿಳಾ ನನ್ನ ಸಹೋದರಿ ಮೂಲಕ ಊರು ತುಂಬ ಸಾಲ ಪಡೆದು ಮೋಸ ಮಾಡಿದ್ದಾರೆ. ನನ್ನ ಸಹೋದರಿಗೆ ಗಂಡ ಇಲ್ಲ, ಅವರು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ತಮ್ಮ ಜೋಬಿ ಆಂಥೋನಿ ಮತ್ತು ಆತನ ಪತ್ನಿ ಶರ್ಮಿಳಾ ಕಾರಣ, ಅವರಿಗೆ ಶಿಕ್ಷೆ ಕೊಡಿಸಿ ಎಂದು ವೀಡಿಯೊದಲ್ಲಿ ಹೇಳಿದ್ಧಾರೆ.

ಜೋಶಿ ಆಂಥೋನಿ ಸಾವಿನ ವಿಚಾರ ತಿಳಿದು ತಮ್ಮ ಜೋಬಿ ಆಂಥೋನಿ ಹಾಗೂ ಪತ್ನಿ ಶರ್ಮಿಳಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೋಬಿ ಹಾಗೂ ಶರ್ಮಿಳಾ ಐಪಿಎಲ್ ಹಾಗೂ ಆನ್ ಲೈನ್ ಗೇಮ್ಗಾಗಿ ಲಕ್ಷಾಂತರ ಸಾಲ ಮಾಡಿಕೊಂಡಿದ್ದರು. ಸಾಲಗಾರರು ಪ್ರತಿ ನಿತ್ಯ ಮನೆಯ ಬಳಿ ಬಂದು ದುಡ್ಡು ಕೇಳುತ್ತಿದ್ದರು. ಇದರಿಂದ ಮನನೊಂದ ಜೋಷಿ ಆಂಥೋನಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಜೋಬಿ ಹಾಗೂ ಶರ್ಮಿಳಾ ವಿಜಯನಗರದ ಕ್ರೀಡಾ ಮೈದಾನದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments