Wednesday, June 24, 2026
Google search engine
Homeರಾಜ್ಯಲಾರಿಗೆ ಕಾರು ಡಿಕ್ಕಿ: ಮದುವೆಗೆ ಹೊರಟ್ಟಿದ್ದ ಮೂವರು ಸಬ್ ಇನ್ ಸ್ಪೆಕ್ಟರ್ ಸಾವು

ಲಾರಿಗೆ ಕಾರು ಡಿಕ್ಕಿ: ಮದುವೆಗೆ ಹೊರಟ್ಟಿದ್ದ ಮೂವರು ಸಬ್ ಇನ್ ಸ್ಪೆಕ್ಟರ್ ಸಾವು

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ಮೂವರು ಸಬ್ ಇನ್ ಸ್ಪೆಕ್ಟರ್ ಗಳು ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ.

ಚಿತ್ರದುರ್ಗದ ಹೆಗ್ಗೆರೆ ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಪೊಲೀಸ್​ ರಿಸರ್ವ್ ಸಬ್ ಇನ್ಸ್​ಪೆಕ್ಟರ್ (ಆರ್​ಎಸ್​​ಐ) ಆದ ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಮೃತಪಟ್ಟಿದ್ದಾರೆ.

ಪೊಲೀಸ್​ ಅಧಿಕಾರಿಗಳು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಬಳ್ಳಾರಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಗಂಭೀರ ಗಾಯಗೊಂಡಿರುವ ಪಿಎಸ್​ಐ ಈಶ್ವರ್ ಹಾಗೂ ಆರ್​ಎಸ್​ಐ ಮಹಾಂತೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಂಜಿತ್ ಬಂಡಾರು, ಐಮಂಗಲ ಠಾಣೆ ಪೊಲೀಸ್​ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಐವರು ಪೊಲೀಸ್ ಅಧಿಕಾರಿಗಳು ಮದುವೆ ಕಾರ್ಯಕ್ರಮಕ್ಕೆ ಕಾರಿನಲ್ಲಿ ಒಟ್ಟಿಗೆ ತೆರಳುತ್ತಿದ್ದು, ಬೆಂಗಳೂರಿಂದ ಬಳ್ಳಾರಿಗೆ ತೆರಳುವ ವೇಳೆ ಅಪಘಾತವಾಗಿದೆ. ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್​ಪಿ ರಂಜಿತ್ ಬಂಡಾರು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments