Wednesday, May 13, 2026
Google search engine
Homeರಾಜ್ಯಟಿಪ್ಪರ್-ಕಾರು ಡಿಕ್ಕಿ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ 5 ಮಂದಿ ದುರ್ಮರಣ

ಟಿಪ್ಪರ್-ಕಾರು ಡಿಕ್ಕಿ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ 5 ಮಂದಿ ದುರ್ಮರಣ

ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ೫ ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಉರುಳಿದ್ದು, ಮಂಡ್ಯ ಮೂಲದ೫ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾದಪ್ಪನ ಭಕ್ತರು ಕೊಳ್ಳೇಗಾಲ ಕಡೆಯಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋರಟಿದ್ದರು ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments