Sunday, June 14, 2026
Google search engine
Homeರಾಜ್ಯಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ವಿಧಿವಶ: ಮುಷ್ಕರ ಮುಂದೂಡಿಕೆ

ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ವಿಧಿವಶ: ಮುಷ್ಕರ ಮುಂದೂಡಿಕೆ

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಅನಂತ್ ಸುಬ್ಬರಾವ್ ಬುಧವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.

ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ನಾಳೆ ಮುಷ್ಕರ ಹಾಗೂ ಬೆಂಗಳೂರು ಚಲೋ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದರು. ಆದರೆ ಅವರ ನಿಧನದಿಂದಾಗಿ ನಾಳೆ ನಡೆಯಬೇಕಾಗಿದ್ದ ಸಾರಿಗೆ ನೌಕರರ ಮುಷ್ಕರ ಹಾಗೂ ಬೆಂಗಳೂರು ಚಲೋವನ್ನು ಮುಂದೂಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments