ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ನಂತರ ಇದೇ ಮೊದಲ ಬಾರಿಗೆ ದೂರವಾಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ದೂರವಾಣಿ ಮಾತುಕತೆ ನಡೆಸಿದ ವೇಳೆ ಅಗತ್ಯ ವಸ್ತುಗಳಿಗೆ ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವ ಕುರಿತು ಇಬ್ಬರೂ ಚರ್ಚಿಸಿದ್ದಾರೆ.
ಎಕ್ಸ್ ನಲ್ಲಿ ಈ ವಿಷಯ ಹಂಚಿಕೊಂಡಿರುವ ಪ್ರಧಾನಿ ಮೋದಿ, ಟ್ರಂಪ್ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಚರ್ಚಿಸಿದೆವು. ಮಧ್ಯಪ್ರಾಚ್ಯದಲ್ಲಿ ಶಾಂತಿ ಕಾಪಾಡುವುದು ಮುಖ್ಯ ಹಾಗೂ ಇಂಧನ ಮುಂತಾದ ಅಗತ್ಯ ವಸ್ತುಗಳ ಪೂರೈಕೆಗಾಗಿ ಹರ್ಮುಜ್ ಜಲಸಂಧಿ ಮುಕ್ತವಾಗಿ ಇರಿಸುವುದು ಒಳ್ಳೆಯದು ಎಂಬ ಅಭಿಪ್ರಾಯಕ್ಕೆ ಬಂದಿದ್ದೇವೆ ಎಂದರು.



