ಅಮೆರಿಕದಿಂದ ಹೊರಗೆ ನಿರ್ಮಾಣವಾಗುವ ಎಲ್ಲಾ ಚಿತ್ರಗಳ ಮೇಲೆ ಶೇ.100ರಷ್ಟು ತೆರಿಗೆ ವಿಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ಷೇತ್ರಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ವಿದೇಶಗಳ ಮೇಲೆ ತೆರಿಗೆ ಹೇರಿದ್ದ ಡೊನಾಲ್ಡ್ ಟ್ರಂಪ್ ಸೋಮವಾರ ಮನರಂಜನಾ ಕ್ಷೇತ್ರದ ಮೇಲೆ ಕಣ್ಣು ಹಾಕಿದ್ದು, ವಿದೇಶೀ ಚಿತ್ರಗಳ ಮೇಲೆ ಶೇ.100ರಷ್ಟು ತೆರಿಗೆ ಹೇರಿದ್ದಾರೆ. ಅಲ್ಲದೇ ಶೀಘ್ರದಲ್ಲೇ ಪೀಠೋಪಕರಣಗಳ ಮೇಲೆ ತೆರಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.
ಅಮೆರಿಕದಲ್ಲಿ ನಿರ್ಮಾಣವಾಗುತ್ತಿದ್ದ ಸಿನಿಮಾಗಳನ್ನು ಮಗುವಿಗೆ ಕ್ಯಾಂಡಿ ಆಸೆ ತೋರಿಸಿದಂತೆ ಕದಿಯಲಾಗುತ್ತಿದೆ. ಕ್ಯಾಲಿಫೋರ್ನಿಯಾದಲ್ಲಿ ನಿರ್ಮಾಣವಾಗುತ್ತಿದ್ದ ಸಿನಿಮಾಗಳು ಬೇರೆ ಕಡೆ ವಲಸೆ ಹೋಗುತ್ತಿರುವುದರಿಂದ ಸಮಸ್ಯೆಗಳು ಆಗುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೇ.100ರಷ್ಟು ತೆರಿಗೆ ವಿಧಿಸಿದ್ದೇವೆ ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವಿವರಿಸಿದ್ದಾರೆ.



